ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ರನ್ನ (Malikayya guttedar) ಹನಿ ಟ್ರ್ಯಾಪ್ (Honey trap) ಮಾಡಿ, ಅವರಿಂದ ಹಣ ಸುಲಿಗೆಗೆ ಪ್ರಯತ್ನಿಸಿದ್ದ ಆರೋಪಿಗಳ ತಂಡದ ಬಳಿ ಒಟ್ಟು 8 ಮಂದಿ ರಾಜಕಾರಣಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ನಲಪಾಡ್ ಬ್ರಿಗೇಡ್ನ (Nalpad brigade) ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ಅವರನ್ನು CCB ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಈ ರೀತಿಯ ಹಲವು ಸ್ಫೋಟಕ ವಿಚಾರಗಳು ಹೊರಬಿದ್ದಿವೆ.
ಈಗಾಗಲೇ ಈ ಎಲ್ಲಾ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ಈ ವಿಡಿಯೋಗಳ ನೈಜತೆ ಬಗ್ಗೆ ಪರಿಶೀಲಿಸಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.