ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ರಾಜ್ಯ ಸರ್ಕಾರ ಯಾವುದೇ ಸಬೆ ಸಮಾರಂಭವನ್ನು ಆಯೋಜಿಸಿರಲಿಲ್ಲ ಇದೀಗ ಆ ಕಾಲ ಕೂಡಿಬಂದಿದೆ. 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೂಹೂರ್ತ ಫಿಕ್ಸ್ ಆಗಿದ್ದು ಸೆಪ್ಟೆಂಬರ್ 23, 24, 25ಕ್ಕೆ ಹಾವೇರಿಯಲ್ಲಿ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಿದ ಅಧಿಕಾರಿಗಳು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ ತಿಳಿಸಿದ್ದಾರೆ.







