• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
December 20, 2024
in Top Story, ಅಂಕಣ, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ
Share on WhatsAppShare on FacebookShare on Telegram

ಮಂಡ್ಯ : 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ADVERTISEMENT

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ:ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.

Janardhana Reddy: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ..! #ctravi #lakshmihebbalkar

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

Tags: 87th Kannada Sahitya ConferenceBJPCongress PartyDr Chandra Shekhara Kambaragreat enthusiasminaugurated by Hon'ble Chief Minister SiddaramaiahJnana Peeth awardeeKannada Sahitya Sammelan organizedMandyaSugar City Mandya.ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಸಕ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನಕ್ಕೆ HD ಕುಮಾರಸ್ವಾಮಿ ಖಂಡನೆ

Next Post

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್:ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್:ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್:ಡಿ.22ರಂದು ಕಲಬುರ್ಗಿಯ 'ಜಯದೇವ ಆಸ್ಪತ್ರೆ' ಲೋಕಾರ್ಪಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada