ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ಲಿಂಗಾಯತ ಮಠದ ಸ್ವಾಮೀಜಿ ಮುರುಘ ಮಠದ ಶಿವಮೂರ್ತಿ ಶರಣಿಗೆ ಸೆಪ್ಟೆಂಬರ್ 14ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪೊಲೀಸರು ಮತ್ತೆ ಪೊಲೀಸ್ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕೋಮಲಾ ಮುರುಘಾಶ್ರೀಗಳಿಗೆ 9 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದರು.

ತನಿಖಾಧಿಕಾರಿಳಾಗಲಿ, ಪೊಲೀಸರಾಗಲಿ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಲಿಲ್ಲ. ತನಿಖೆ ಮುಗಿಯಿತಾ ಎಂಬ ಪ್ರಶ್ನೆಗೆ ಪೊಲೀಸರು ಕೂಡ ಸಮರ್ಪಕ ಉತ್ತರ ಕೊಡದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದರು.
ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗದ ಜೈಲಿನಲ್ಲಿ ಇರಿಸಲಾಗುವುದು. ಕಾರಾಗೃಹಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸೂಚಿಸಲಾಗಿದ್ದು, ಚಿತ್ರದುರ್ಗ ಮಠ ಸೇರಿದಂತೆ ನಗರದಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ.











