ತಾಂತ್ರಿಕ ಕಾರಣದಿಂದ ರೂಪ್ ವೇ ಮಧ್ಯೆ ಕೇಬಲ್ ಕಾರು ಸಿಲುಕಿದ್ದರಿಂದ ೯ ಮಂದಿ ಅಪಾಯದಲ್ಲಿ ಸಿಲುಕಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದ್ದು, ಇಬ್ಬರನ್ನು ರಕ್ಷಿಸಲಾಗಿದೆ.
ಪರ್ವಾನೊ ಎಂಬ ಪ್ರವಾಸಿ ತಾಣದಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆ.
ಕೇಬಲ್ ಕಾರಿನಲ್ಲಿ 11 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ರೂಪ್ ವೇ ಮಧ್ಯದಲ್ಲಿ ಕೇಬಲ್ ಕಾರು ಸಿಲುಕಿಕೊಂಡಿದ್ದು, ಕೂಡಲೇ ಇಬ್ಬರನ್ನು ರಕ್ಷಿಸಲಾಗಿದೆ. ಉಳಿದವರ ರಕ್ಷಣೆಗೆ ರಕ್ಷಣಾ ಸಿಬ್ಬಂದಿ ಪ್ರಯತ್ನ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.