• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

90,000 ಕೋಟಿ ಸಾಲ ಮಾಡಲು ಹೊರಟ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದ ಸಿದ್ದರಾಮಯ್ಯ

by
November 2, 2020
in ದೇಶ
0
90
Share on WhatsAppShare on FacebookShare on Telegram

ಸರ್ಕಾರದ ನಿರ್ವಹಣೆಗೆ 90,000 ಕೋಟಿ ಸಾಲ ಮಾಡಲು ಹೊರಟಿರುವ ಯಡಿಯೂರಪ್ಪ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳುಹಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ ಎಂದು ಪ್ರಶ್ನೆ ಹಾಕಿದ್ದಾರೆ.

ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ. 3/5#ಉತ್ತರಕೊಡಿ_ಬಿಎಸ್‌ವೈ

— Siddaramaiah (@siddaramaiah) November 2, 2020


ADVERTISEMENT

ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read: ಉತ್ತರ ಕರ್ನಾಟಕ ನೆರೆ: ಕೇಂದ್ರದ ಭೇಟಿಗೆ ಸರ್ವಪಕ್ಷ ನಿಯೋಗ ರೂಪಿಸಲು ಸಿದ್ದರಾಮಯ್ಯ ಆಗ್ರಹ

ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.35,000 ಕೋಟಿ, ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ? ಆಗಸ್ಟ್‌ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Also Read: ಜಿಎಸ್‌ಟಿ ಪಾಲು ಕೊಡದಿದ್ದರೆ ಹೋರಾಟ: ಕೇಂದ್ರದ ವಿರುದ್ಧ ತಿರುಗಿಬಿದ್ದ ರಾಜ್ಯಗಳು!

ನೆರೆ ಪರಿಹಾರ, ಜಿಎಸ್‌ಟಿ ಪಾಲು ತರಲು ತರಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ನರೇಂದ್ರ ಮೋದಿಯವರಲ್ಲಿ ಪ್ರಶ್ನಿಸಲು ಸಾಧ್ಯವಾಗದಿದ್ದರೆ ಸರ್ವ ಪಕ್ಷ ನಿಯೋಗ ರಚಿಸಿ ನಮ್ಮನ್ನು ಕರೆದುಕೊಂಡು ಹೋಗಿ ಎಂದು ಸಿದ್ದರಾಮಯ್ಯ ಈ ಹಿಂದೆ ಆಗ್ರಹಿಸಿದ್ದರು.

Tags: former chief minister Siddaramaiahsiddaramaiahಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ಸರ್ಕಾರಸಿದ್ದರಾಮಯ್ಯ
Previous Post

ಆರ್ಥಿಕ ಸಂಕಷ್ಟ: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ

Next Post

ಅಸ್ತಿತ್ವದಲ್ಲೇ ಇಲ್ಲದ ಲವ್ ಜಿಹಾದ್ ವಿರುದ್ದ ಕಾನೂನು ರೂಪಿಸಲು ಮುಂದಾದ ಯೋಗಿ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಅಸ್ತಿತ್ವದಲ್ಲೇ ಇಲ್ಲದ ಲವ್ ಜಿಹಾದ್ ವಿರುದ್ದ ಕಾನೂನು ರೂಪಿಸಲು ಮುಂದಾದ ಯೋಗಿ

ಅಸ್ತಿತ್ವದಲ್ಲೇ ಇಲ್ಲದ ಲವ್ ಜಿಹಾದ್ ವಿರುದ್ದ ಕಾನೂನು ರೂಪಿಸಲು ಮುಂದಾದ ಯೋಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada