• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಶಾ ಕಾರ್ಯಕರ್ತೆಯರಿಗೆ 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ ಆರೋಗ್ಯ ಸಚಿವರು

ADVERTISEMENT

ಮುಂಬರುವ ಬೆಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಸಿಎಂ ಜೊತೆ ಚರ್ಚಿಸುವುದಾಗಿ ಭರವಸೆ

ಪಕ್ಷದ ಸಂಘಟನೆ ದೃಷ್ಟಿಯಿಂದ ಎಲ್ಲಾ ಮಂತ್ರಿಗಳಿಗೆ, ಶಾಸಕರಿಗೆ DK Shivakumar ಸೂಚನೆ ಏನ್ಗೊತ್ತಾ? #pratidhvani

ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವರು, ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು.

15 ಸಾವಿರ ವೇತನ ಫಿಕ್ಸ್ ಮಾಡುವಂತೆ ಆಶಾ ಕಾರ್ಯಕರ್ತೆಯರು ಈ ವೇಳೆ ಸಚಿವರಿಗೆ ಒತ್ತಾಯಿಸಿದರು. ಈ ಕುರಿತಂತೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 8 ಸಾವಿರ ಗೌರವಧನ ಖಚಿತವಾಗಿ ಸಿಗುತ್ತಿದೆ. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರ್ಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನ ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ ಎಂದರು.

ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ. ಏಕೆಂದರೆ ಪ್ರತ್ಸಾಹಧನ ಕೇಂದ್ರ ಸರ್ಕಾರ ನೀಡುವ ಅನುದಾನಗಳ ಮೇಲೆ ಅವಲಂಬಿತವಾಗಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ನಮೂದಾಗುವ ಆಶಾ ಕಾರ್ಯಕರ್ತೆಯರ ಸೇವಾಚಟುವಟಿಕೆಗಳ ಮೇಲೆ ಕೇಂದ್ರ ಸರ್ಕಾರ ಅನುದಾನವನ್ನ ಒದಗಿಸುತ್ತದೆ. ಇದು ಇಂತಿಷ್ಟೇ ಬರುತ್ತದೆ ಖಚಿತವಾಗಿ ಹೇಳಲು ಹೇಗೆ ಸಾಧ್ಯ ಎಂದರು. ನಮಗಿರುವ ಮಾಹಿತಿಯ ಪ್ರಕಾರ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿಸಿ ಲೆಕ್ಕ ಹಾಕಿದರೆ ಸರಾಸರಿ ಮಾಸಿಕ 9500 ರೂ ಆಶಾ ಕಾರ್ಯಕರ್ತೆಯರಿಗೆ ಪಾವತಿಯಾಗುತ್ತಿದೆ. ಹೀಗಾಗಿ 9500 ರೂಗಳನ್ನ ಬೇಕಾದರೆ ಮುಂಗಡವಾಗಿ ನೀಡಬಹುದು. ಬಳಿಕ ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗಳು ನಮೂದಾಗುವುದರ ಅನ್ವಯ ಪ್ರೋತ್ಸಾಹಧನ ಲಭ್ಯವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಅಲ್ಲದೇ ಮುಂಬರುವ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಿ ಜೊತೆ ಚರ್ಚಿಸುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. ರಾಜ್ಯ ಸರ್ಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರಿಗೆ ರಜೆಗಳನ್ನ ನಿಗದಿ ಮಾಡುವ ಬೇಡಿಕೆ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ದಿನೇಶ್ ಗುಂಡೂರಾವ್, ರಜೆಗಳನ್ನ ಕೇಳುವುದು ಆಶಾ ಕಾರದಯಕರ್ತೆಯರ ಹಕ್ಕು. ಈ ನಿಟ್ಟಿನಲ್ಲಿ ಚರ್ಚಿಸಿ ಕ್ರ‌ಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Tags: AnganavadiAsha karyakartasBJPCongress PartydcmDinesh Gundu RaoDK ShivakumarHealth Ministersiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ; ಆಪ್‌ ನಿಂದ ಚುನಾವಣಾ ಆಯೋಗಕ್ಕೆ ದೂರು

Next Post

ಭಾರತದ ಗಡಿಯಲ್ಲಿರುವ ಭಯೋತ್ಪಾದಕರ ತಾಣ ನಾಶಕ್ಕೆ ರಹಸ್ಯ ಕ್ರಮ ; ಕೇಂದ್ರ ಸರ್ಕಾರ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

ಭಾರತದ ಗಡಿಯಲ್ಲಿರುವ ಭಯೋತ್ಪಾದಕರ ತಾಣ ನಾಶಕ್ಕೆ ರಹಸ್ಯ ಕ್ರಮ ; ಕೇಂದ್ರ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada