• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

M S Sathyu: “ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96 ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

ಪ್ರತಿಧ್ವನಿ by ಪ್ರತಿಧ್ವನಿ
July 3, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು (Padmashree Award Winner M S Sathyu) ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು “ಕೊರಗಜ್ಜ” ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತು ಚಿತ್ರ ತಂಡ ಹೆಚ್ಚು ಸಂಭ್ರಮಿಸುತ್ತಿದೆ. ಇದಕ್ಕೆ ಕಾರಣ ಈ ಚಿತ್ರದಲ್ಲಿ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಸತ್ಯುರವರು ನೀಡಿರುವ ಕೊಡುಗೆ. ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಮ್ಸ್ ಬ್ಯಾನರ್ ಅಡಿಯ ಬಹು ನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” (Koragajja) ಇನ್ನೇನು ಬಿಡುಗಡೆಗೆ ಸಿದ್ಧವಾಗುತ್ತಿದೆ. ದೇಶದ ಬಲು ದೊಡ್ದ ಆಡಿಯೋ ಕಂಪೆನಿ ಆಡಿಯೋ ರೈಟ್ ಪಡೆದುಕೊಂಡಿದೆ. ಈ ನಡುವೆ ಸಿನಿಮಾದ ಅತ್ಯಂತ ವಿಶಿಷ್ಟ ಎನಿಸುವ ಕಾಸ್ಟ್ಯೂಮ್ ನ್ನು ದೇಶದ ಖ್ಯಾತ ಕಲಾ ವಿನ್ಯಾಸಗಾರ, ರಂಗ ಕರ್ಮಿ-ನಿರ್ದೇಶಕ ಎಂ ಎಸ್ ಸತ್ಯುರವರ ಬಳಿ ಸಾಕಷ್ಟು ಚರ್ಚಿಸಿ, ವಸ್ತ್ರ ವಿನ್ಯಾಸ ಗೊಳಿಸಿರುವ ವಿಚಾರವನ್ನು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ದೇಶಕರು, ಸತ್ಯು ರವರು ತನ್ನ 96ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬಹಿರಂಗ ಪಡಿಸಿರುತ್ತಾರೆ.

ADVERTISEMENT

ಇದು ಸುಮಾರು ಎಂಟುನೂರು ವರ್ಷಗಳ ಹಿಂದಿನ ಕಥೆಯಾದ್ದರಿಂದ ಆ ಕಾಲಘಟ್ಟಕ್ಕೆ ಸರಿ ಹೊಂದುವ ಕಾಸ್ಟ್ಯೂಮ್ ನ್ನು ವಿನ್ಯಾಸಗೊಳಿಸಲು ಆಳವಾದ ಜ್ಞಾನ ಮತ್ತು ಪರಿಕಲ್ಪನೆ ಬೇಕಾಗಿರುತ್ತದೆ. ಸತ್ಯು ರವರು ಮಾಡಿರುವ ಕಲಾ ವಿನ್ಯಾಸ ಗಳು ಲಂಡನಿನ ಷೇಕ್ಸ್ ಪಿಯರ್ ಮ್ಯೂಸಿಯಂ ನಲ್ಲೂ ಸಂಗ್ರಹವಾಗಿದೆ. ಗುರುಗಳಾದ ಸತ್ಯು ರವರ ಹತ್ರ “ಕೊರಗಜ್ಜ ” ಮತ್ತು ನನ್ನ ಮುಂಬರುವ ಸಿನಿಮಾದ ವಸ್ತ್ರ ವಿನ್ಯಾಸ ಮತ್ತು ಕಲಾ ವಿಭಾಗದ ಬಗ್ಗೆ ಹಲವಾರು ಬಾರಿ ಫೋನ್ ನಲ್ಲಿ ಚರ್ಚಿಸಿದೆ. ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಷ್ಟರಲ್ಲಿ ಸತ್ಯು ವಯೋ ಸಹಜ ಖಾಯಿಲೆಯಿಂದ ಸೊರಗಿ ಹೋಗತೊಡಗಿದರು. ನಂತರ ಸ್ವತಃ ಆಳವಾದ ಅಭ್ಯಾಸ ಮಾಡಿ ಉಡುಗೆ- ತೊಡುಗೆ ಮತ್ತು ಕಲಾ ವಿನ್ಯಾಸ ಮಾಡಿದೆ. ಆದರೆ ನನ್ನ “ಪರಿ” ಸಿನಿಮಾದ ಕಲಾ ನಿರ್ದೇಶನವನ್ನು ಸತ್ಯು ರವರೇ ಮಾಡಿದ್ದರು- ಎಂದು ಸುಧೀರ್ ತಿಳಿಸಿದರು.

“ಕೊರಗಜ್ಜ” ಸಿನಿಮಾದ ಕಲಾ ನಿರ್ದೇಶನವನ್ನೂ ನಿರ್ದೇಶಕರೇ ಮಾಡಿರುತ್ತಾರೆ. ಸುಧೀರ್ ಅತ್ತಾವರ್ ರವರು ಎಂ ಎಸ್ ಸತ್ಯುರವರ ಜೊತೆ ಸಿನಿಮಾ,ರಂಗಭೂಮಿ ಮತ್ತು ಟಿವಿ ಮಾಧ್ಯಮದಲ್ಲಿ ಸುಮರು _10 ವರ್ಷ ಕೆಲಸ ಮಾಡಿರುತ್ತಾರೆ. “ಇಜ್ಜೋಡು” ಚಿತ್ರಕ್ಕೆ ಎಲ್ಲಾ ಹಾಡುಗಳನ್ನೂ ಸುಧೀರ್ ರಚಿಸಿರುತ್ತಾರೆ. ಇಂದು ಬಹಳ ದೊಡ್ದ ಹೆಸರು ಮಾಡುತ್ತಿರುವ ವಿನ್ಯಾಸಕಾರರು, ದೇಶದ ಶ್ರೇಷ್ಠ ಕಲಾ ನಿರ್ದೇಶಕ ರಾಗಿರುವ ಸತ್ಯು ರವರ ಮೂಸೆಯಿಂದ ಬಂದಿರುತ್ತಾರೆ. ಅಂತಹ ಶ್ರೇಷ್ಠ ವಿನ್ಯಾಸಗಾರ ಎಂ ಎಸ್ ಸತ್ಯು “ಕೊರಗಜ್ಜ” ಸಿನಿಮಾದ ಕಥೆ ಕೇಳಿ ಬಹಳ ಇಷ್ಟ ಪಟ್ಟಿದ್ದರು. ಆದರೆ ಸಿನಿಮಾ ಮಾಡಲು ಅತ್ಯಂತ ಚಾಲೆಂಜಿಂಗ್ ಮತ್ತು ಕಠಿಣ ಎಂಬ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ಸಿನಿಮಾದ ಕಾಸ್ಟ್ಯೂಮನ್ನು ಖ್ಯಾತ ಹಾಲಿವುಡ್-ಬಾಲಿವುಡ್ ಮತ್ತು ಯುರೋಪಿಯನ್ ಸಿನಿಮಾಗಳ ನಟ, ಕೊರಗಜ್ಜ ” ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರ ನಿಭಾಯಿಸಿರುವ ಕಬೀರ್ ಬೇಡಿ ಬಹಳವಾಗಿ ಮೆಚ್ಚಿಕೊಂಡು ತನ್ನ ಇನ್ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.

ತ್ರಿವಿಕ್ರಮ ಸಪಲ್ಯ ನಿರ್ಮಿಸುತ್ತಿರುವ “ಕೊರಗಜ್ಜ” ಸಿನಿಮಾವನ್ನು ದೇಶಾದ್ಯಂತ ತೆರೆ ಕಾಣಲು ಕಾರ್ಯ ತಂತ್ರ ರೂಪುಗೊಳ್ಳುತ್ತಿದೆ. ಈ ನಡುವೆ ಆಡಿಯೋ, ಮತ್ತು ಟ್ರಯಲರನ್ನು ಲಂಡನ್ ನ ಒಂದು ವಿಶೇಷ ಸ್ಥಳದಲ್ಲಿ ಬಿಡುಗಡೆ ಗೊಳಿಸಲು ತಂಡ ಸಜ್ಜಾಗುತ್ತಿದೆ. ಖ್ಯಾತ ಸಂಗೀತಗಾರ ಗೋಪಿ ಸುಂದರ್ ರವರ ಹೊಸ ’ಝೋನರ” ನ ಮ್ಯೂಸಿಕ್, ಈಗಾಗಲೇ ದೇಶದ ಹಲವಾರು ಖ್ಯಾತ ಆಡಿಯೋ ಕಂಪೆನಿಗಳ ಗಮನ ಸೆಳೆಯುವಲ್ಲಿ ಸಫಲವಾಗಿದೆ.ಅದಕ್ಕೆ ಪೂರಕವಾಗಿ ಶ್ರೇಯಾ ಘೋಷಾಲ್, ಸುನಿಧಿ ಚೌಹಾನ್, ಶಂಕರ್ ಮಹದೇವನ್, ಜಾವೆದ್ ಆಲಿ, ಶರೋನ್ ಪ್ರಭಾಕರ್, ಸ್ವರೂಪ್ ಖಾನ್, ಅರ್ಮನ್ ಮಲಿಕ್ ಜೊತೆಗೆ ದಕ್ಷಿಣ ಭಾರತದ ಪ್ರತಿಭೆಗಳಾದ ರಮೇಶ್ ಚಂದ್ರ, ಅನಿಲ ರಾಜಿವ್, ಸನ್ನಿದಾನಂದನಮ್, ವಿಜೇಶ್ ಗೋಪಾಲ್, ಪ್ರತಿಮ ಭಟ್, ಕಾಂಜನ ಮೊದಲಾದವರ ಕಂಠ ಸಿರಿಯಲ್ಲಿ ವಿನೂತನ ಗೀತೆಗಳು ಮೂಡಿಬಂದಿದೆ.ಚಿತ್ರಕ್ಕೆ ಮನೋಜ್ ಪಿಳ್ಳೈ ಮತ್ತು ಪವನ್ ಕ್ಯಾಮರಾ, ವಿದ್ಯಾಧರ್ ಶೆಟ್ಟಿ ಮತ್ತು ಜಿತ್ ಜೋಶ್ ಸಂಕಲನ, ಬಿಬಿನ್ ದೇವ್ ಸೌಂಡ್ ಡಿಸೈನ್, ಲಿಜು ಪ್ರಭಾಕರ್ ಡಿ ಐ ಕಲರಿಂಗ್, ಲವನ್-ಕುಶನ್ ವಿ ಎಫ಼್ ಎಕ್ಸ್ ಮತ್ತು ಗ್ರಾಫಿಕ್ಸ್ ಕೆಲಸ ಈ ಚಿತ್ರಕ್ಕಿದೆ..

Tags: AudioHollywoodkabir bedikannada cinemakoragajjaM S SatyusandalwoodShreya GoshalSudheer AttavarSunidhi ChowhantollywoodTrailerTrivikrama SaphalyaVijesh Gopal
Previous Post

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

Next Post

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada