ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ನಿಷೇಧ ಹೇರಿದಂತ ಸರ್ಕಾರ ಆದೇಶವನ್ನು, ಇಂದು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಇಂದು ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾಗಿದ್ದಂತ ಆನ್ ಲೈನ್ ಗೇಮಿಂಗ್ ನಿಷೇಧದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನೆಡಸಿದ ಕರ್ನಾಟಕ ಹೈಕೋರ್ಟ್ ದ್ವಿ ಸದಸ್ಯ ಪೀಠ ಸರ್ಕಾರ ಹೊರಡಿಸಿದ್ದ ಆನ್ ಲೈನ್ ಗೇಮಿಂಗ್ ನಿಷೇಧ ಆದೇಶವನ್ನು ರದ್ದು ಪಡಿಸಿದೆ. “ಈ ನಿಬಂಧನೆಗಳು ಸಂವಿಧಾನದ ಅಧಿಕಾರವ್ಯಾಪ್ತಿಯ ಹೊರತಾಗಿದೆ” ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಇಡೀ ಕಾಯಿದೆಯನ್ನು ರದ್ದುಪಡಿಸಲಾಗಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.

ಪೋಕರ್, ಚೆಸ್, ರಮ್ಮಿ, ಫ್ಯಾಂಟಸಿ ಆಟಗಳು (ಫ್ಯಾಂಟಸಿ ಕ್ರಿಕೆಟ್, ಫುಟ್ಬಾಲ್ ಮತ್ತು ಬ್ಯಾಸ್ಕೆಟ್ಬಾಲ್), ತಾತ್ಕಾಲಿಕ ಆಟಗಳು ಮತ್ತು ಇ-ಕ್ರೀಡೆಗಳು ಕೌಶಲ್ಯ ಸಂಬಂಧಿಸಿದ್ದಾಗಿವೆ ಎಂದು ಹಲವು ನ್ಯಾಯಾಲಯಗಳು ಹೇಳಿವೆ. ಕೆಲವು ಆಟಗಳು ಹಣದ ಅಪಾಯವನ್ನು ಒಳಗೊಂಡಿವೆಯಾದರೂ ಅವು ಜೂಜಾಟಕ್ಕೆ ಸಂಬಂಧಿಸಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.