ರಾಜ್ಯದಲ್ಲಿ ಸದ್ಯ ಜೋರಾಗಿ ಗದ್ದಲ ಎಬ್ಬಿಸಿರುವ ಹಿಜಾಬ್ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಕುಂಕುಮ ಹಚ್ಚಿದ ವಿದ್ಯಾರ್ಥಿನಿಗೆ ಕಾಲೇಜು ಪ್ರವೇಶ ನಿರಾಕರಣೆ ಮಾಡಲಾಗಿದೆ.
ಕುಂಕುಮ ಹಚ್ಚಿದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಕಾಲೇಜು ಸಿಬ್ಬಂದಿ ವಿರುದ್ದ ಪ್ರತಿಭಟಿಸಿದ ವಿದ್ಯಾರ್ಥಿಯು ಹಿಜಾಬ್ ಹಾಗೂ ಕೇಸರಿ ಶಾಲಿಗೆ ನಿಷೇಧವಿದೆ ಹೊರತು ಕುಂಕುಮ ಅಥವಾ ತಿಲಕ ಹಚ್ಚಿಕೊಂಡು ಬರುವವರಿಗೆ ಅಲ್ಲ ಎಂದು ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇನ್ನು ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ಜೋರಾಗಿ ನಡೆಯುತ್ತಿದ್ದು, ಚಿತ್ರದುರ್ಗ ನಗರದಲ್ಲಿರುವ SRS ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಿಸದಂತೆ ತಡೆಯಲಾಯಿತು ಈ ವೇಳೆ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟಿಸಿದರು. ಇದಕ್ಕೆ ವಿರೋಧಿಸಿದ ಕಾಲೇಜಿನ ಇತರೆ ವಿದ್ಯಾರ್ಥಿಗಳು ಜೈಶ್ರೀರಾಮ್ ಘೋಷಣೆ ಕೂಗಿದರು. ಇತ್ತ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾರಣ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ಹಿಂತಿರುಗಿದರು.
ಬೆಳಗಾವಿ ಜಿಲ್ಲೆಯ Vijaya Institute For Para Medical Science ಕಾಲೇಜಿನಲ್ಲಿ ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುಬೇಕು ಎಂದು ಒತ್ತಾಯಿಸಿ ಸತತ ಎರಡನೇ ದಿನವು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜೆ. ಹಿರೇಮಠ ಹಾಗೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮನವೊಲ್ಲಿಸುವ ಪ್ರಯತ್ನ ಮಾಡಿದ್ದರು ಸಹ ವಿದ್ಯಾರ್ಥಿಗಳು ಯಾವುದಕ್ಕು ಕಿವಿಗೊಡಲಿಲ್ಲ. ಈ ಕುರಿತು ವಿದ್ಯಾರ್ಥಿಗಳ ಪಾಲಕರೊಂದಿಗೆ ಚರ್ಚಿಸಲಾಗುವುದು ಎಂದು ಹಿರೇಮಠ ಹೇಳಿದ್ದಾರೆ.