ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಾಗೂ ಕೋಮುಗಲಭೆ ಪ್ರಚೋದನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ನಾವು ಬಿಡುವುದಿಲ್ಲ ಜಿಲ್ಲಯಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಕೊಲೆಯಾದ ಮರುಕ್ಷಣದಿಂದಲೇ ತನಿಖೆ ಆರಂಭಿಸಿದ್ದು ಆದಷ್ಟು ಬೇಗ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು ಉಳಿದ ಇಬ್ಬರನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
