ಮಾತಿನ ಮಲ್ಲಿ ಎಂದೇ ಖ್ಯಾತಿ ಪಡೆದಿದ್ದ ಆರ್ ಜೆ ರಚನಾ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳ್ಳಗ್ಗೆ ಜೆ.ಪಿ.ನಗರದ ತಮ್ಮ, ನಿವಾಸದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಗದೇ ಮೃತಪಟ್ಟಿದ್ದಾರೆ.
2013ರಲ್ಲಿ ಬಿಡುಗಡೆಯಾದ ಸಿಂಪಲ್ ಆಗ್ ಒಂದ್ ಲವ್ ಸ್ಟೋರಿ ಚಿತ್ರದಲ್ಲಿ ನಟಿಸಿದ್ದರು. ತಮ್ಮ ನಾರ್ಮಲ್ ಲೈಪ್ ನಲ್ಲಿ ಸದಾ ಹಸನ್ಮುಖಿಯಾಗಿದ್ದರು. ಆದರೆ, ಕೆಲ ತಿಂಗಳುಗಳಿಂದ ಡಿಪ್ರೆಷನ್ನಲ್ಲಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಆ ಡಿಪ್ರೆಷನ್ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ರಚನಾ ತಮ್ಮ ಸಾವಿನಲ್ಲು ಸಾರ್ಥಕತೆ ಮೆರೆದಿದ್ದಾರೆ ರಚನಾ ಅವರ ಅಂಗಾಂಗಗಳನ್ನು ದಾನ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಇದರಿಂದ ಅವರು ಸಮಾಜದ ಎಲ್ಲರಿಗೂ ಮಾದರಿಯಾಗಿದ್ದಾರೆ.







