• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?

Any Mind by Any Mind
February 22, 2022
in ಕರ್ನಾಟಕ
0
ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?
Share on WhatsAppShare on FacebookShare on Telegram

ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು? ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನಿಸಿದ್ದಾರೆ.

ADVERTISEMENT

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಬಿಜೆಪಿ ನಾಯಕ ಈಶ್ವರಪ್ಪ ಶಾಸಕರಾಗಿ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು? ಹಿಂದೂಗಳ ರಕ್ಷಣೆಗಾಗಿ ಬಿಜೆಪಿಗೆ ಮತ ಹಾಕಬೇಕೆಂದು ಹೇಳಿ ಮತ ಹಾಕಿಸಿಕೊಂಡಿದ್ದಾರೆ. ಆದರೆ ಅವರೇ ಹೇಳಿಕೊಳ್ಳುವಂತೆ ಅವರ ಹಿಂಬಾಲಕನ ಹತ್ಯೆಯಾಗಿದೆ. ಇದೇನಾ ಇವರು ಮಾಡುವ ಹಿಂದೂಗಳ ರಕ್ಷಣೆ? ಹಿಂದೂಗಳಿಗೆ ರಕ್ಷಣೆ ನೀಡುತ್ತೇನೆ ಎಂದು ಬೊಬ್ಬಿಟ್ಟರೆ ಸಾಲದು ಎಂದು ಟೀಕಿಸಿದರು.

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾದರೆ ಮಾತ್ರ ಸಾಲದು. ಆತನ ಕೊಲೆ ಪ್ರಕರಣದ ಹಿಂದಿನ ಷಢ್ಯಂತ್ರ ಬಯಲಾಗಬೇಕು. ನಿಜಕ್ಕೂ ಯಾರ ಹುನ್ನಾರ ಆ ಕೃತ್ಯ ಎಂಬುದು ಹೊರಬರಬೇಕು ಎಂದು ಒತ್ತಾಯಿಸಿದ ಪ್ರಸನ್ನಕುಮಾರ್, ಹಾಗಾಗಿ, ಸತ್ಯ ಹೊರಬರಬೇಕಾದರೆ ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕು. ಎನ್ಐಎ ತನಿಖೆಗೆ ಬಿಜೆಪಿ ಮುಖಂಡರೇ ಆಗ್ರಹಿಸಿದ್ದಾರೆ. ಇದು ಕೇವಲ ಹೇಳಿಕೆಯಾಗಬಾರದು. ನಿಜವಾದ ತನಿಖೆಯಾಗಿ ಆರೋಪಿಗಳ ಜೊತೆಗೆ ಇದರ ಹಿಂದಿನ ಶಕ್ತಿಗಳಿಗೂ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.

ಹರ್ಷನ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ ಎಂದು ಸಚಿವರೇ ಹೇಳಿದ್ದಾರೆ. ಹಾಗಾದರೆ ಗಲಾಟೆ ಮಾಡಿದವರನ್ನು ಪತ್ತೆ ಮಾಡಿದವರು ಪೊಲೀಸರಿಗೆ ಏಕೆ ಮಾಹಿತಿ ನೀಡಲಿಲ್ಲ. ಸಚಿವರ ಪ್ರಚೋದನಕಾರಿ ಹೇಳಿಕೆಯ ಕುಮ್ಮಕ್ಕಿನಿಂದಲೇ ಕೆಲವರು ಗಲಭೆ ಎಬ್ಬಿಸಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದ್ದಾರೆ. ಇದಕ್ಕೆಲ್ಲಾ ಈಶ್ವರಪ್ಪ ಅವರೇ ಕಾರಣ. ಈ ನಷ್ಟವನ್ನು ಅವರೇ ತುಂಬಿಕೊಡಬೇಕೆಂದೂ ಪ್ರಸನ್ನಕುಮಾರ್ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಎರಡು ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಕಾನೂನು ವ್ಯವಸ್ಥೆ ಕಾಪಾಡಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಮುಖಂಡರು ಭಾವನಾತ್ಮಕವಾಗಿ ಮಾತನಾಡಿ ಮತ್ತೆ ಮತ್ತೆ ಶಾಂತಿ ಕದಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಹರ್ಷನ ಸಾವು ಅವರ ಕುಟುಂಬದವರನ್ನು ಕಾಡುತ್ತಲೇ ಇದೆ. ಅವರು ದುಃಖ ನೋಡಿದರೆ ಸಂಕಟವಾಗುತ್ತದೆ. ಆ ಕುಟುಂಬಕ್ಕೆ ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ಕೆಲಸ ನೀಡಬೇಕು, ಗಲಭೆಯಲ್ಲಿ ಇದುವರೆಗೂ ಆಸ್ತಿ ಪಾಸ್ತಿ ಕಳೆದುಕೊಂಡವರಿಗೂ ಪರಿಹಾರ ನೀಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಹಾಗೇ, ಹಿಂದೂಗಳಿಗೆ ರಕ್ಷಣೆ ಕೊಡದ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಹರ್ಷನ ಕೊಲೆ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Tags: ಕೆ.ಬಿ. ಪ್ರಸನ್ನಕುಮಾರ್ಬಲಿಯಾಗಬೇಕುಸಚಿವ ಈಶ್ವರಪ್ಪಹಿಂದೂಗಳು
Previous Post

ಮಾತು ನಿಲ್ಲಿಸಿದ ಮಾತಿನ ಮಲ್ಲಿ ರಚನಾ

Next Post

ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada