• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ರಷ್ಯಾ ಉಕ್ರೇನ್ ಬಿಕ್ಕಟ್ಟು ವಿಚಾರವಾಗಿ ಭಾರತದ ನಿರ್ಧಾರ ತಪ್ಪು : ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ!

Any Mind by Any Mind
February 26, 2022
in ಇದೀಗ
0
ರಷ್ಯಾ ಉಕ್ರೇನ್ ಬಿಕ್ಕಟ್ಟು ವಿಚಾರವಾಗಿ ಭಾರತದ ನಿರ್ಧಾರ ತಪ್ಪು : ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ!
Share on WhatsAppShare on FacebookShare on Telegram

ರಷ್ಯಾ ಉಕ್ರೇನ್ ಬಿಕ್ಕಟ್ಟು (Russia Ukraine Crisis) ವಿಚಾರವಾಗಿ ಭಾರತದ ನಿರ್ಧಾರ ತಪ್ಪು, ದೇಶದಲ್ಲಿ ಇಂದಿನ ವಿದೇಶಾಂಗ ನೀತಿ (Foreign Policy) ಸರಿಯಿಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ಪರಿಷತ್ನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (DK Suresh), ದೇಶದ ವಿದೇಶಾಂಗ ನೀತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಂದು ವಿದೇಶಾಂಗ ನೀತಿ ಸಂಪೂರ್ಣವಾಗಿ ಹದಗೆಟ್ಟಿದೆ. ಆದರೆ ಈ ವಿಚಾರ ಮಾತನಾಡುವ ಸಮಯ ಇದಲ್ಲ. ಉಕ್ರೇನ್ ನಲ್ಲಿ ಇರುವ ಜೀವಗಳ ರಕ್ಷಣೆ ಬಗ್ಗೆ ಯೋಚಿಸಬೇಕು. ವಿಶ್ವಸಂಸ್ಥೆಯಲ್ಲಿ ನಾವು ಸ್ಪಷ್ಟ ನಿಲುವು ಹೇಳಬೇಕಾಗಿತ್ತು. ಹಿಂದೆ ಸರಿಯುವುದು ತಪ್ಪು. ಶಾಂತಿಗಾಗಿ ಇರುವವರು ನಾವು, ಶಾಂತಿಯಿಂದ ದೇಶ ಗೆದ್ದಿರುವವರು ನಾವು, ಶಾಂತಿಯ ಮಂತ್ರದ ಜೊತೆ ಸ್ಪಷ್ಟ ಸಂದೇಶ ನೀಡಬೇಕಾಗಿತ್ತು. ಅದನ್ನು ಮಾಡದಿರುವುದು ಇವರ ನಿಲುವು ಏನೆಂಬುದು ತೋರುತ್ತದೆ ‘ ಎಂದರು.

ಮುಂದುವರೆದು, ಇಡೀ ಪ್ರಪಂಚ ಉಕ್ರೇನ್ ಕಡೆ ತಿರುಗಿ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ (International level Discus) ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ನಾಗರೀಕರು, ಭಾರತೀಯರ ರಕ್ಷಣೆ ಮಾಡಲು ಮುಂಜಾಗೃತಾ ಕ್ರಮ ಕೈಗೊಳ್ಳಬೇಕಿತ್ತು. ಭಾರತೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹೋಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟು ದಿನ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ ಈಗ ತುರ್ತು ಸೇವೆ ಬಳಸುವ ಮಾತಾಡುತ್ತಿದೆ. ಅವರ ಹಾಹಾಕಾರ ಹಾಗೂ ಅವರ ಸಂಕಷ್ಟದ ಮಾತುಗಳನ್ನು ನೋಡಿದರೆ ನಮ್ಮ ಮೈ ನಡುಗುತ್ತದೆ ಎಂದಿದ್ದಾರೆ. ಕನ್ನಡಿಗರು (Kannagadigaru) ಸೇರಿದಂತೆ ಭಾರತೀಯರನ್ನು ವಾಪಸ್ ಕರೆತರಲು ಪ್ರಧಾನಮಂತ್ರಿಗಳು ಕೂಡಲೇ ಅಗತ್ಯ ಕ್ರಮಕೈಗೊಳ್ಳಬೇಕು. ಸುಮಾರು 350 ರಿಂದ 400 ಮಂದಿ ಕನ್ನಡಿಗರು ಸಿಕ್ಕಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರನ್ನು ವಾಪಸ್ ಕರೆಸಿಕೊಳ್ಳಲು ಕ್ರಮಕೈಗೊಳ್ಳಬೇಕು.

ರಷ್ಯಾ ಉಕ್ರೇನ್‌ ಬಿಕ್ಕಟ್ಟು ವಿಚಾರವಾಗಿ ಭಾರತದ ನಿರ್ಧಾರ ತಪ್ಪು : Modi ಸರ್ಕಾರದ ವಿರುದ್ಧ ಸಂಸದ DK Suresh ಕಿಡಿ

ರಷ್ಯಾ ಉಕ್ರೇನ್ ಬಿಕ್ಕಟ್ಟು ವಿಚಾರವಾಗಿ ಮಾತನಾಡಿದ ಪರಿಷತ್ನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ (BK Hariprasad), ಉಕ್ರೇನ್ ಹಾಗೂ ರಷ್ಯಾ ವಿರುದ್ಧದ ಸಮರ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನರೇಂದ್ರ ಮೋದಿ (Narendra Modi) ಅವರ ಸರ್ಕಾರ ವಿದೇಶಾಂಗ ನೀತಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಅಲಿಪ್ತ ರಾಷ್ಟ್ರಗಳ ಕೂಟದ ನೇತೃತ್ವ ವಹಿಸಿದ್ದ ನೆಹರೂ ಅವರ ವಿದೇಶಾಂಗ ನೀತಿಯನ್ನು ಇಂದು ಎಲ್ಲರು ನೆನಪಿಸಿಕೊಳ್ಳುತ್ತಿದ್ದಾರೆ. ದಿನಬೆಳಗಾದರೆ ಪಂಡಿತ್ ನೆಹರೂ ಅವರ ಬಗ್ಗೆ ಮಾತನಾಡುವ ಸಂಘ ಪರಿವಾರದವರು, ಬಿಜೆಪಿ (BJP), ಮೋದಿ ಅವರಿಗೆ ಅಲಿಪ್ತ ರಾಷ್ಟ್ರಗಳ ನೀತಿ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಕಾರ್ಮೋಡ ಕಳೆದ ಒಂದು ತಿಂಗಳಿಂದ ಆವರಿಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನಮ್ಮವರನ್ನು ಅಲ್ಲಿಂದ ಕರೆತರಬೇಕಾಗಿತ್ತು. ಯಾವುದೇ ಕ್ರಮ ಕೈಗೊಳ್ಳದ ಕಾರಣ, ಸಂಕಷ್ಟ ಪಡುವಂತಾಗಿದೆ. ಮುನ್ನೆಚ್ಚರಿಕೆ ಇಲ್ಲದೆ ಲಾಕ್ ಡೌನ್ ಮಾಡಿದಂತೆ ಈಗ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿದಂತೆ ಈಗ ಪದಾಡುತ್ತಿದ್ದಾರೆ. ಕೇಂದ್ರದ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದೆ ಎಂಬುದು ಈ ಮೂಲಕ ತಿಳಿಯುತ್ತದೆ’ ಎಂದು ಉತ್ತರಿಸಿದರು.

ಉಕ್ರೇನ್ ಹಾಗೂ ರಷ್ಯಾ ವಿರುದ್ಧದ ಸಮರ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ನರೇಂದ್ರ ಮೋದಿ ಅವರ ಸರ್ಕಾರ ವಿದೇಶಾಂಗ ನೀತಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಅಲಿಪ್ತ ರಾಷ್ಟ್ರಗಳ ಕೂಟದ ನೇತೃತ್ವ ವಹಿಸಿದ್ದ ನೆಹರೂ ಅವರ ವಿದೇಶಾಂಗ ನೀತಿಯನ್ನು ಇಂದು ಎಲ್ಲರು ನೆನಪಿಸಿಕೊಳ್ಳುತ್ತಿದ್ದಾರೆ.

ದಿನಬೆಳಗಾದರೆ ಪಂಡಿತ್ ನೆಹರೂ ಅವರ ಬಗ್ಗೆ ಮಾತನಾಡುವ ಸಂಘ ಪರಿವಾರದವರು, ಬಿಜೆಪಿ, ಮೋದಿ ಅವರಿಗೆ ಅಲಿಪ್ತ ರಾಷ್ಟ್ರಗಳ ನೀತಿ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ.

ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಕಾರ್ಮೋಡ ಕಳೆದ ಒಂದು ತಿಂಗಳಿಂದ ಆವರಿಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನಮ್ಮವರನ್ನು ಅಲ್ಲಿಂದ ಕರೆತರಬೇಕಾಗಿತ್ತು. ಯಾವುದೇ ಕ್ರಮ ಕೈಗೊಳ್ಳದ ಕಾರಣ, ಸಂಕಷ್ಟ ಪಡುವಂತಾಗಿದೆ. ಮುನ್ನೆಚ್ಚರಿಕೆ ಇಲ್ಲದೆ ಲಾಕ್ ಡೌನ್ ಮಾಡಿದಂತೆ ಈಗ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿದಂತೆ ಈಗ ಪದಾಡುತ್ತಿದ್ದಾರೆ. ಕೇಂದ್ರದ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದೆ ಎಂಬುದು ಈ ಮೂಲಕ ತಿಳಿಯುತ್ತದೆ’ ಎಂದು ಉತ್ತರಿಸಿದರು.

ವಿದೇಶಾಂಗ ನೀತಿಯನ್ನು ನಿಭಾಯಿಸುವಲ್ಲಿ ನರೇಂದ್ರ ಮೋದಿ ವಿಫಲ : B. K. Hariprasad

ಇದೇ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ಕುಎಇತು ಮಾತನಾಡಿದ ಡಿಕೆ ಶಿವಕುಮಾರ್(DK Shivakumar), ಬೆಂಗಳೂರು ನಾಗರೀಕರಿಗೆ ಕುಡಿಯುವ ನೀರು ಪೂರೈಸಲು, ಕಾವೇರಿ ಪ್ರದೇಶದ ರೈತರನ್ನು ಬದುಕಿಸಲು ನೀರಿಗಾಗಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮೇಕೆದಾಟುವಿನಿಂದ ರಾಮನಗರದವರೆಗೆ ಪಾದಯಾತ್ರೆ ಮಾಡಿದ್ದೆವು. ಈ ಮಧ್ಯೆ ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಜನರ ಆರೋಗ್ಯ, ಕೋರ್ಟ್ ಆದೇಶಕ್ಕೆ ಗೌರವ ಸೂಚಿಸಲು ಈ ಪಾದಯಾತ್ರೆಯನ್ನು ನಿಲ್ಲಿಸಿದ್ದೆವು. ಎಲ್ಲಿ ನಿಲ್ಲಿಸಿದ್ದೇವೋ ಈಗ ಅಲ್ಲಿಂದ ಮತ್ತೆ ಆರಂಭಿಸುತ್ತಿದ್ದೇವೆ ಎಂದಿದ್ದಾರೆ.

ಇದು ಪಕ್ಷಾತೀತ ಹೋರಾಟ. ಈ ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್ ಪಕ್ಷ ವಹಿಸಿಕೊಂಡಿದೆ. ಎಲ್ಲ ಅಪಾರ್ಟ್ಮೆಂಟ್ ಸಂಘಗಳು, ಕಾರ್ಮಿಕ, ಕೈಗಾರಿಕಾ ಸಂಘಟನೆ, ಎನ್ಜಿಓ, ಚಿತ್ರರಂಗದ ಎಲ್ಲ ವಿಭಾಗದವರು, ಧರ್ಮಗುರುಗಳು, ಜನಸಾಮಾನ್ಯರು ಈ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ.

ನಾಳೆ ಬೆಳಗ್ಗೆ 9 ಗಂಟೆಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನಂತರ ಪಾದಯಾತ್ರೆ ಆರಂಭವಾಗಲಿದೆ.

ಮಾರ್ಚ್ 3 ರಂದು ಮಧ್ಯಾಹ್ನ ಪಾದಯಾತ್ರೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದ್ದು, ಅಂದು ಇಲ್ಲಿ ಸಭೆ ನಡೆಸಲಾಗುವುದು. ಸಭೆಯ ಆಯೋಜನೆ ವಿಚಾರವಾಗಿ ನಾನು ಹಾಗೂ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಡಿ.ಕೆ. ಸುರೇಶ್ ಅವರ ಜತೆ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ.

ನಾವು ಐದು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಪಾದಯಾತ್ರೆ ಮಾಡಬೇಕಾಗಿತ್ತು, ಬಜೆಟ್ ಅಧಿವೇಶನ ಇರುವ ಕಾರಣ ಕೇವಲ 3 ದಿನ ಪಾದಯಾತ್ರೆ ಮಾಡುತ್ತೇವೆ. ಪಾದಯಾತ್ರೆಗೆ ಬರುವವರು ಮೆಟ್ರೋರೈಲು ಬಳಸಿಕೊಳ್ಳಲು ಅನುಕೂಲವಾಗುವಂತೆ ಈ ಸ್ಥಳ ಆಯ್ಕೆ ಮಾಡಿದ್ದೇವೆ.
.

ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದಂತೆ ಈಗ ನಿಮ್ಮ ಕುಡಿಯುವ ನೀರಿನ ಹಕ್ಕಿಗಾಗಿ ಹೋರಾಟ ಮಾಡಿ. ಪಾದಯಾತ್ರೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಿ. ಆಗ ನಿಮಗೆ ಪ್ರಮಾಣ ಪತ್ರ ನೀಡಲಾಗುವುದು.

ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಎಲ್ಲರೂ ಸಹಕಾರ ನೀಡಲಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಸಮುದಾಯದ ಕಾರ್ಮಿಕನನ್ನು ಭಜರಂಗ ದಳದ ಕಾರ್ಯಕರ್ತರು ಹತ್ಯೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಯಾವ ನಿಲುವು ತಾಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಹತ್ಯೆಯನ್ನು ಭಜರಂಗ ದಳದವರಾದರೂ ಮಾಡಲಿ ಕಾಂಗ್ರೆಸ್ ನವರಾದರೂ ಮಾಡಲಿ ಗೃಹ ಸಚಿವರು, ಪೊಲೀಸರು ಕೂಡಲೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಿವಮೊಗ್ಗ ಪ್ರಕರಣ ಹಾಗೂ ಈ ಪ್ರಕರಣದಲ್ಲಿ ಹತ್ಯೆಗೊಂಡವರಿಗೆ ನ್ಯಾಯ ಒದಗಿಸಿಕೊಡಬೇಕು. ಇದು ಪೊಲೀಸರ ಕರ್ತವ್ಯ. ಅವರು ಅದನ್ನು ಮಾಡಲಿ’ ಎಂದು ಆಗ್ರಹಿಸಿದರು.

ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ರಕ್ಷಣೆಗೆ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ, ‘ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಕರೆತರಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಕಾವೇರಿ ಏಳನೇ ಹಂತ ಬಂದರೂ 7 ಸಾವಿರ ಅಪಾರ್ಟ್ಮೆಂಟ್ ಗಳಿಗೆ ನೀರು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸದಾ ಜನಪರ ಕಾರ್ಯಕ್ರಮ ಹಮ್ಮಿಕೊಂಡು ಜನರ ಪರವಾಗಿ ಹೋರಾಡುತ್ತಿದೆ. ಜನಸಾಮಾನ್ಯರು ಈ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಈ ಮೂಲಕ ಕೋರುತ್ತೇನೆ.’

Tags: BJPBK HariprasadCongress PartyCovid 19dk sureshforeign policyInternational level DiscusKannagadigaruNarendra ModiRussia Ukraine Crisisಕರೋನಾಕೋವಿಡ್-19ಡಿ.ಕೆ.ಸುರೇಶ್ಡಿಕೆ ಶಿವಕುಮಾರ್ನರೇಂದ್ರ ಮೋದಿಪಂಡಿತ್ ನೆಹರೂಬಿಕೆ ಹರಿಪ್ರಸಾದ್ಬಿಜೆಪಿಬೆಂಗಳೂರುಭಾರತದ ನಿರ್ಧಾರಮೇಕೆದಾಟು ಪಾದಯಾತ್ರೆಮೋದಿ ಸರ್ಕಾರರಷ್ಯಾ ಉಕ್ರೇನ್ ಬಿಕ್ಕಟ್ಟುರಾಜ್ಯ ನಾಯಕರು
Previous Post

Ukraine Russia ಬಿಕ್ಕಟ್ಟು | ಭಾರತಕ್ಕೆ ಬಂದಿಳಿಯಲಿರುವ 2ನೇ ವಿಮಾನ : ಭಾರತೀಯರನ್ನು ಬರಮಾಡಿಕೊಳ್ಳಲಿರುವ ಕೇಂದ್ರ ಸಚಿವರು

Next Post

Mekedatu Project : ಫೆ. 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ; ಡಿಕೆ ಶಿವಕುಮಾರ್​​ | DK Shivakumar

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025

ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು-ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕೃಷ್ಣ ಬೈರೇಗೌಡ

December 12, 2025
Next Post
Mekedatu Project : ಫೆ. 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ; ಡಿಕೆ ಶಿವಕುಮಾರ್​​ | DK Shivakumar

Mekedatu Project : ಫೆ. 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ; ಡಿಕೆ ಶಿವಕುಮಾರ್​​ | DK Shivakumar

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!