ಪಂಚರಾಜ್ಯ ಚುನಾವಣೆ ಪಲಿತಾಂಶ ಹೊರಬೀಳುತ್ತಲೇ ರಾಷ್ಟ್ರ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ ಈ ಮಧ್ಯೆ ಪಂಜಾಬ್ನಲ್ಲಿ ಗೆದ್ದು ಬಗುವ ವಿಶ್ವಾಸದಲ್ಲಿದ್ದ ಕಾಂಗ್ರೆಸ್ ಹೀನಾ ಮಾನವಾಗಿ ಸೋತಿದೆ.
ಇನು ನಿನ್ನೆಯಷ್ಟೇ ಗೆಲ್ಲುವ ಭರವಸೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ (PPCC) ಆಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ವಕ್ಷೇತ್ರ ಅಮೃತಸರದಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದು 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ತಮ್ಮ ನೇತೃತ್ವದಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಲು ವಿಫಲವಾದ ಕಾರಣ PCC ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಇನ್ನು ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಆಪ್ ಅಧಿಕಾರದತ್ತ ತನ್ನ ದಾಪುಗಾಲಿಟ್ಟಿದೆ ಇತ್ತ ಪಂಜಾಬ್ನ ಹಾಲಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಲು ರಾಜ್ಯಪಾಲರ ಭೇಟಿಗೆ ಸಮಯವಕಾಶ ಕೋರಿದ್ದಾರೆ.
ಇನ್ನು ಚುನಾವಣಾ ಪಲಿತಾಂಶದ ಕುರಿತು ಟ್ವೀಟ್ ಮಾಡಿರುವ ಸಿಧು ಮತದಾರರು ನೀಡಿರುವ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.






