• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆದಿವಾಸಿ ಹುಡುಗಿಯರ ಮೇಲೆ ಹಾಡಹಗಲೇ ಲೈಂಗಿಕ ದೌರ್ಜನ್ಯ: 15 ಆರೋಪಿಗಳ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
March 14, 2022
in ದೇಶ
0
ಆದಿವಾಸಿ ಹುಡುಗಿಯರ ಮೇಲೆ ಹಾಡಹಗಲೇ ಲೈಂಗಿಕ ದೌರ್ಜನ್ಯ: 15 ಆರೋಪಿಗಳ ಬಂಧನ
Share on WhatsAppShare on FacebookShare on Telegram

ADVERTISEMENT

ಬ್ಲರ್ಬ್:‌ ಕೇಸರಿ ಶಾಲು ಧರಿಸಿರುವ ಪುಂಡ ಯುವಕರ ಗುಂಪೊಂದು ಹಾಡಹಗಲೇ ಆದಿವಾಸಿ ಹುಡುಗಿಯರನ್ನು ನಡುರಸ್ತೆಯಲ್ಲಿ ಎಳೆದಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್‌ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟು ಹಾಕಿತ್ತು.

ಮಧ್ಯಪ್ರದೇಶದ ಅಲಿರಾಜ್‌ಪುರದಲ್ಲಿ ಪುಂಡ ಯುವಕರ ಗುಂಪೊಂದು ಆದಿವಾಸಿ ಹುಡುಗಿಯರ ಮೇಲೆ ಹಾಡಹಗಲೇ ನಡೆಸಿದ ಲೈಂಗಿಕ ದಾಳಿಗೆ ಸಂಬಂಧಿಸಿದಂತೆ ಪೊಲೀಸರು 15 ಮಂದಿ ಯುವಕರನ್ನು ಬಂಧಿಸಿದ್ದಾರೆ.

ಬುಡಕಟ್ಟು ಜಾತ್ರೋತ್ಸವದ ವೇಳೆ ಇಬ್ಬರು ಆದಿವಾಸಿ ಹುಡುಗಿಯರ ಮೇಲೆ ಯುವಕರ ಗುಂಪು ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಒಂದು ಕಳೆದ ಎರಡು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸುವ ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಅಲಿರಾಜ್‌ಪುರ ಪೊಲೀಸರು ಒಟ್ಟು ಹದಿನೈದು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

#Horrific A tribal girl is being molested by saffron-clad Hindu goons in broad daylight. The Police are just standing and watching.

Incident of misbehavior with a tribal girl in Bhagoria Haat in Alirajpur district of Madhya Pradesh !! pic.twitter.com/OZTHTgKvI0

— The Dalit Voice (@ambedkariteIND) March 13, 2022

ಯುವಕರ ಗುಂಪು ಇಬ್ಬರು ಹುಡುಗಿಯರಿಗೆ ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ ನೀಡಿ, ಎಳೆದಾಡಿರುವ ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ, ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 15 ಮಂದಿ ಬಂಧನವಾಗಿದ್ದರೂ ಸಹ, ಸಂತ್ರಸ್ತ ಹುಡುಗಿಯರ ಮಾಹಿತಿ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ.

ಬಂಧಿತರೆಲ್ಲರೂ 19 ರಿಂದ 25 ವರ್ಷದೊಳಗಿನ ಯುವಕರಾಗಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರದಿಂದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಘಟನೆ ವಾಲ್ಪುರ ಗ್ರಾಮದಲ್ಲಿ ನಡೆದಿದ್ದು, ʼಭಗೋರಿಯಾʼ ಎಂಬ ಬುಡಕಟ್ಟು ಜಾತ್ರೋತ್ಸವ ವೇಳೆ ಈ ಹೇಯ ದಾಳಿ ನಡೆದಿದೆ ಎಂದು ವರದಿಯಾಗಿದೆ.

ವೈರಲ್‌ ಆಗಿರುವ ವಿಡಿಯೊದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಕೇಸರಿಧಾರಿ ಯುವಕರ ಗುಂಪು ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ಕಾಣಬಹುದು. ವಾಹನದ ಮರೆಯಲ್ಲಿರುವ ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಒಂದೆಡೆಯಾದರೆ, ಮತ್ತೊಂದೆಡೆ ಇನ್ನೋರ್ವ ಬಾಲಕಿಯನ್ನು ನಡುರಸ್ತೆಯಲ್ಲೇ ಎಳೆದಾಡಿ, ಅಪ್ಪಿ ಕಿರುಕುಳ ನೀಡುವುದನ್ನು ಕಂಡು ಬಂದಿದೆ.

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯಗಳು ಭಗೋರಿಯಾ (ಬುಡಕಟ್ಟು ಉತ್ಸವ) ವನ್ನು ಆಯೋಜಿಸುತ್ತದೆ. ಇದು ಆದಿವಾಸಿಗಳ ಪಾಲಿನ ದೊಡ್ಡ ಹಬ್ಬವಾಗಿದ್ದು, ಪ್ರತಿ ವರ್ಷ ಗಂಗಾ ಮಹಾದೇವನ ದೇವಸ್ಥಾನದಲ್ಲಿ ಜಾತ್ರೆಯನ್ನು ಆಯೋಜಿಸುವುದರೊಂದಿಗೆ ಹಬ್ಬ ಪ್ರಾರಂಭವಾಗುತ್ತದೆ.

https://twitter.com/kiranshaw/status/1503064275903868930

Tags: BJPCovid 19ಕರೋನಾಕೋವಿಡ್-19ನರೇಂದ್ರ ಮೋದಿಬಂಧನಬಿಜೆಪಿಲೈಂಗಿಕ ದೌರ್ಜನ್ಯ
Previous Post

ಮೆಗಾಸಿಟಿ ಪ್ರಾಜೆಕ್ಟ್ ಮಾಡಲು ಹೋಗಿ ಜನರನ್ನು ಬೀದಿ ಪಾಲು ಮಾಡಿದ ವ್ಯಕ್ತಿ ನನ್ನ ಬಗ್ಗೆ ಮಾತಾಡ್ತಿದಾನೆ : ಸಿಪಿ.ಯೋಗೇಶ್ವರ್ಗೆ HDK ಟಾಂಗ್

Next Post

ನಾಳೆ ಹಿಜಾಬ್ ಅರ್ಜಿ ತೀರ್ಪು ಪ್ರಕಟ : ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ – ಬೆಂಗಳೂರು ನಗರದಾದ್ಯಂತ 1 ವಾರಗಳ ಕಾಲ 144 ಸೆಕ್ಷನ್ ಜಾರಿ!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
`ಧರ್ಮದ ಅತ್ಯಗತ್ಯ ಆಚರಣೆಗಳು’ಮತ್ತು ಕೋರ್ಟ್ ತೀರ್ಪುಗಳು

ನಾಳೆ ಹಿಜಾಬ್ ಅರ್ಜಿ ತೀರ್ಪು ಪ್ರಕಟ : ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ - ಬೆಂಗಳೂರು ನಗರದಾದ್ಯಂತ 1 ವಾರಗಳ ಕಾಲ 144 ಸೆಕ್ಷನ್ ಜಾರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada