• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರ ವಿರುದ್ಧ ಗುಡುಗಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Any Mind by Any Mind
March 17, 2022
in ಕರ್ನಾಟಕ
0
ಹಿಜಾಬ್ ವಿವಾದ | ರಾಜಕೀಯ ಲಾಭಕ್ಕಾಗಿ ಹಿಜಾಬ್ ವಿವಾದ ಉಲ್ಭಣಗೊಳಿಸಿ ಈಗ ಕೈಚೆಲ್ಲಿ ಕುಳಿತ ಸರ್ಕಾರ : ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ  ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ.

ADVERTISEMENT

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು ಅದರಲ್ಲಿ, ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕರಿಂದ ಹಿಡಿದು  ಕಾರ್ಯಕರ್ತರ ವರೆಗೆ  ಪ್ರತಿಯೊಬ್ಬರೂ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಇದೇ ನಂಬಿಕೆ ಮತ್ತು  ಆತ್ಮ ವಿಶ್ವಾಸದಿಂದ ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ.

ಹೊರಗಿನ ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಕೆಲವು ಒಳಗಿನ ಹಿತಶತ್ರುಗಳ ಕುಟಿಲ ಕಾರಸ್ತಾನಗಳಿಂದ ವಿಚಲಿತರಾಗದೆ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭರವಸೆ ಇಟ್ಟು ಪಕ್ಷಕ್ಕೆ ಶಕ್ತಿತುಂಬಲು ಪ್ರತಿಯೊಬ್ಬ ಕಾಂಗ್ರೆಸಿಗನು ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳಬೇಕು. 

ಈಗ ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು, ಅವರದ್ದೇ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಬಾರಿ ಲೋಕಸಭಾ ಚುನಾವಣೆಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿರುವುದು ಆತ್ಮದ್ರೋಹವಲ್ಲದೆ ಮತ್ತೇನು?

ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿಯೇ ಕೇಂದ್ರದಲ್ಲಿ ಮಾತ್ರವಲ್ಲ, ಹದಿನೈದಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು‌ ಎನ್ನುವುದನ್ನು ಇಂದು ಅವರ ನಾಯಕತ್ವವನ್ನು ಪ್ರಶ್ನಿಸುವವರು ನೆನಪು ಮಾಡಿಕೊಳ್ಳಬೇಕಾಗಿದೆ.

ದೇಶಕ್ಕೆ ಬಲಿದಾನಗೈದ ಪತಿಯ ಅಗಲಿಕೆಯ ಶೋಕ ಮತ್ತು ಎರಡು ಎಳೆಯ ಮಕ್ಕಳ ಭವಿಷ್ಯದ ಕಾಳಜಿಯಿಂದ ರಾಜಕೀಯದಿಂದ ದೂರ ಇದ್ದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವನ್ನು ಉಳಿಸಲಿಕ್ಕಾಗಿ ಒತ್ತಾಯದಿಂದ ಸಕ್ರಿಯ ರಾಜಕೀಯಕ್ಕೆ ಎಳೆದು ತಂದಿದ್ದ ಕೆಲವು ನಾಯಕರೇ ಈಗ ಸೋನಿಯಾಸೈದ್ಧಾಂತಿಕ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ.

2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಶ್ರೀಮತಿ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ. ಇಂದಿನ‌ ಟೀಕಾಕಾರರು ಈ ತ್ಯಾಗವನ್ನು ಕಂಡಿಲ್ಲವೇ?

ಕೆಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು.‌ ಆದರೆ ಆಹಾರ, ಶಿಕ್ಷಣ, ಉದ್ಯೋಗ ಮತ್ತು ಮಾಹಿತಿಯ ಶಾಸನಾತ್ಮಕ ಹಕ್ಕನ್ನು ನೀಡಿದ್ದ ಕಾರ್ಯಕ್ರಮಗಳ ರೂವಾರಿಯಾದ ಶ್ರಿಮತಿ ಸೋನಿಯಾ ಗಾಂಧಿಯವರು ದೇಶದ ಜನತೆಯ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಆ ಚಿತ್ರವನ್ನು ಅಳಿಸಲಾಗದು.

ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ‌ ಮತ್ತು ಪ್ರಿಯಾಂಕ ಗಾಂಧಿಯವರು ಒಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ. ಇಂದಿನ‌ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ.

ಕೋಮುವಾದಿ ರಾಜಕಾರಣ, ಮಾಧ್ಯಮಗಳ ಮೂಲಕ‌ ನಡೆಸಲಾಗುತ್ತಿರುವ ಸುಳ್ಳುಗಳ ಅಪಪ್ರಚಾರ, ದುಡ್ಡಿನ ಬಲದ ಚುನಾವಣಾ ತಂತ್ರ-ಕುತಂತ್ರಗಳ ಎದುರು ಸೈದ್ಧಾಂತಿಕ ರಾಜಕಾರಣಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ  ಹಿನ್ನಡೆಯಾಗಿರಬಹುದು. ಇದು ತಾತ್ಕಾಲಿಕ ಹಿನ್ನಡೆ, ಸತ್ಯವೇ ಗೆಲ್ಲುವುದು.

“ಸತ್ಯಮೇವ ಜಯತೆ” ಎಂದು ಬರೆದಿದ್ಧಾರೆ.

Tags: BJPCongress PartyCovid 19ಕಾಂಗ್ರೆಸ್ ನಾಯಕತ್ವದಲಿತ ನಾಯಕತ್ವನರೇಂದ್ರ ಮೋದಿನಾಯಕತ್ವ ಬದಲಾವಣೆನಾಯಕತ್ವ ಸಂಘರ್ಷಬಿಜೆಪಿವಿಪಕ್ಷ ನಾಯಕ ಸಿದ್ದರಾಮಯ್ಯಸಿದ್ದರಾಮಯ್ಯಸೋನಿಯಾ ಗಾಂಧಿ
Previous Post

ʼನಮ್ಮನ್ನು ಕೇವಲ ರಾಜಕೀಯಕ್ಕಾಗಿ ಬಳಸಲಾಗುತ್ತಿದೆʼ : BJP ವಿರುದ್ಧ ಕಾಶ್ಮೀರಿ ಪಂಡಿತರ ಆಕ್ರೋಶಕ್ಕೆ ಕಾರಣವೇನು?

Next Post

ಗಾಂಧಿ ಪರಿವಾರದ ನಿಷ್ಠರನ್ನು ಪ್ರಮುಖ ಹುದ್ದೆಗಳಿಂದ ದೂರವಿಡಿ : ಜಿ-23 ನಾಯಕರ ಆಗ್ರಹ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಗಾಂಧಿ ಪರಿವಾರದ ನಿಷ್ಠರನ್ನು ಪ್ರಮುಖ ಹುದ್ದೆಗಳಿಂದ ದೂರವಿಡಿ : ಜಿ-23 ನಾಯಕರ ಆಗ್ರಹ

ಗಾಂಧಿ ಪರಿವಾರದ ನಿಷ್ಠರನ್ನು ಪ್ರಮುಖ ಹುದ್ದೆಗಳಿಂದ ದೂರವಿಡಿ : ಜಿ-23 ನಾಯಕರ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada