ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 18 ಲಕ್ಷ ಮನೆಗಳು ಮಂಜೂರಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದು ಈ ಮೂಲಕ ರಾಜ್ಯದ ಗ್ರಾಮೀಣ, ನಗರ ಪ್ರದೇಶದ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ. ಸೋಮಣ್ಣ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 18 ಲಕ್ಷ ಮನೆಗಳು ಮಂಜೂರಾಗಿದ್ದು, ಇದರಲ್ಲಿ ನಾಲ್ಕು ಲಕ್ಷ ಮನೆಗಳನ್ನು ಗ್ರಾಮೀಣ ಭಾಗಕ್ಕೆ ನೀಡಲಾಗಿದೆ. 3 ಲಕ್ಷ ಮನೆಗಳನ್ನು ಬಸವ ಯೋಜನೆಯಡಿ ಮಂಜೂರು ಮಾಡಲಾಗಿದೆ. ವಸತಿ ನಿಗಮದಿಂದ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಯನ್ನು 1.20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ವಸತಿ ಇಲಾಖೆ ಯಿಂದ ರಾಜ್ಯದಲ್ಲಿ 6,600 ನಿವೇಶನ ಖರೀದಿಸಿ ಬಡವರಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.