ಮಾರ್ಚ್ 15 ರಂದು ಹಿಜಾಬ್ ಪ್ರಕರಣದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ( High Court ) ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಇಬ್ಬರು ಕಿಡಿಗೇಡಿಗಳನ್ನು ಶನಿವಾರ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ತಿರುನೆಲ್ವೇಲಿಯಿಂದ ಕೋವೈ ರಹಮತುಲ್ಲಾ ಮತ್ತು ತಂಜಾವೂರಿನ ಎಸ್ ಜಮಾಲ್ ಮೊಹಮ್ಮದ್ ಉಸ್ಮಾನಿ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರೂ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ) ನ ಸದಸ್ಯರು ಎಂದು ತಿಳಿದು ಬಂದಿದೆ.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ಈ ಆರೋಪಿಗಳಿಗೆ ಪೊಲೀಸರು ಕೈಕೋಳ ತೊಡಿಸಿದ್ದಾರೆ. ಇದೇ ವೇಳೆ ಈ ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
‘ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಆಚರಣೆಯಲ್ಲ’ ಎಂದು ಕಳೆದವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ಥಿ ನೇತೃತ್ವದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗು ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ವಿಶೇಷ ನ್ಯಾಯಪೀಠ ರಿಟ್ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿತ್ತು.
ಜಾರ್ಖಂಡ್ನಲ್ಲಿ ಬೆಳಗಿನ ವಾಕಿಂಗ್ ವೇಳೆ ಜಿಲ್ಲಾ ನ್ಯಾಯಾಧೀಶರೊಬ್ಬರ ಮೇಲೆ ವಾಹನ ಹರಿಸಿ ಕೊಂದು ಹಾಕಲಾಗಿತ್ತು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕೂಡಾ ಎಲ್ಲಿಗೆ ಬೆಳಗಿನ ವಾಕ್ ಹೋಗುತ್ತಾರೆ ಅನ್ನೋದು ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಆರೋಪಿಗಳನ್ನು