• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ವಿವಿ ಕುಲಪತಿ ನೇಮಕದಲ್ಲಿ ಮುಗಿಯದ ಗೊಂದಲ : ಸರ್ಕಾರ, ರಾಜ್ಯಪಾಲರಿಂದ ಸಿಗದ ನಿರ್ದೇಶನ!

ಪ್ರತಿಧ್ವನಿ by ಪ್ರತಿಧ್ವನಿ
March 27, 2022
in ಕರ್ನಾಟಕ
0
ಬೆಂಗಳೂರು ವಿವಿ ಕುಲಪತಿ ನೇಮಕದಲ್ಲಿ ಮುಗಿಯದ ಗೊಂದಲ : ಸರ್ಕಾರ, ರಾಜ್ಯಪಾಲರಿಂದ ಸಿಗದ ನಿರ್ದೇಶನ!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ ರದ್ದಾದರೂ ಗೊಂದಲ ಮುಗಿದಿಲ್ಲ. ಕುಲಪತಿ ಬದಲಾವಣೆ ಕುರಿತು ಸರ್ಕಾರ, ರಾಜ್ಯಪಾಲರಿಂದ ಇನ್ನೂ ಯಾವುದೇ ನಿರ್ದೇಶನ ಸಿಕ್ಕಿಲ್ಲ. ಹೀಗಾಗಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಗೊಂದಲದಲ್ಲಿದ್ದು, ಸಭೆಗಳ ಮೇಲೆ ಸಭೆ ಮಾಡಿ, ಕುಲಪತಿ ವಿವಾದ ಬಗೆಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ.

ಹೈ ಕೋರ್ಟ್‌ ತೀರ್ಪಿಗೂ ಬಗ್ಗದ ಕುಲಪತಿ!

ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಸ್ಥಾನಕ್ಕೆ ಪ್ರೊ.ವೇಣುಗೋಪಾಲ್‌ ಅವರನ್ನು ನೇಮಕ ಮಾಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿ ಮೂರು ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ದಿನ ಮೂರು ದಿನಗಳು ಕಳೆದರೂ ಸರ್ಕಾರ ಮತ್ತು ರಾಜ್ಯಪಾಲರಿಂದ ಮುಂದೆನು ಮಾಡ್ಬೇಕು ಅನ್ನೋದರ ಬಗ್ಗೆ ಯಾವುದೇ ನಿರ್ದೇಶನ ಬಂದಿಲ್ಲ. ಹೀಗಾಗೆ ವಿವಿಯ ಅಧಿಕಾರಿಗಳು ಪೇಚೆಗೆ ಸಿಲುಕಿದ್ದಾರೆ ವಿವಿಯ ಸಿಂಡಿಕೇಟ್ ಸದಸ್ಯರು ಸಭೆಗಳ ಮೇಲೆ ಸಭೆ ಮಾಡಿ, ಈ ಅನಿಶ್ಚಿತತೆಯ ಬಗ್ಗೆ ಸ್ಪಷ್ಟ ಮಾರ್ಗದರ್ಶನ ನೀಡುವಂತೆ ಕೋರಿ ಅಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಡಾ ವೇಣುಗೋಪಾಲ್‌ ಅವರು ಈಗಲೂ ಕುಲಪತಿ ಕಾರು ಬಳಕೆ ಮಾಡುತ್ತಿದ್ದಾರೆ. ತಮ್ಮ ವಿಭಾಗದ ಕಚೇರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ಕುರಿತು ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಸಿಂಡಿಕೇಟ್ ಸದಸ್ಯ ಸುಧಾಕರ್ ದೂರುತ್ತಾರೆ.

ಗೊಂದಲದಲ್ಲಿ ವಿವಿ ಸಿಂಡಿಕೇಟ್‌ ಅಧಿಕಾರಿಗಳು!

ವಿವಿ ಕುಲಪತಿ ಹುದ್ದೆ ಖಾಲಿ ಇರುವುದರಿಂದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ವಿವಿಯ ಮೇಲೆ ಕೆಟ್ಟಪರಿಣಾಮ ಬೀರುತ್ತದೆ. ಸರ್ಕಾರ, ರಾಜ್ಯಪಾಲರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು. ಸರ್ಕಾರ ಕೂಡಲೇ ಹೊಸ ಕುಲಪತಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು, ಅಲ್ಲಿಯವರೆಗೆ ವಿವಿಯ ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿಯ ಹಿರಿಯ ಡೀನ್ ಅವರನ್ನೇ ರಾಜ್ಯಪಾಲರು ಹಂಗಾಮಿ ಕುಲಪತಿಯನ್ನು ನೇಮಕ ಮಾಡಬೇಕು ಎಂದು ಬೆಂ.ವಿವಿಯ ಸಿಂಡಿಕೇಟ್‌ ಸದಸ್ಯರು ಒತ್ತಾಯಿಸಿದ್ದಾರೆ. ಆದರೆ ಡಾ. ವೇಣುಗೋಪಾಲ ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ಕಾನೂನಿನ ತೊಡಕಿದ್ದು, ಆದಷ್ಟು ಬೇಗನೆ ನಿಯಮದ ಪ್ರಕಾರ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳುತ್ತಾರೆ.

ಬೆಂಗಳೂರು ವಿವಿ ಒಂದಿಲ್ಲೊಂದು ವಿಚಾರದಲ್ಲಿ ಚರ್ಚೆಯಲ್ಲಿ ಇದ್ದೇ ಇರುತ್ತೆ. ಈಗ ವಿಸಿ ನೇಮಕ ಯಾವಾಗ ಆಗುತ್ತೆ? ಹಂಗಾಮಿ ವಿಸಿ ಯಾರಾಗ್ತಾರೆ ? ಸರ್ಕಾರ ಏನು ನಿರ್ದೇಶನ ನೀಡುತ್ತೆ ಎಂದು ಕಾದು ನೋಡಬೇಕಿದೆ.

Tags: BJPCongress PartyCovid 19ನೇಮಕಾತಿಬಿಜೆಪಿಬೆಂಗಳೂರು ವಿವಿ
Previous Post

12-14 ವರ್ಷದೊಳಗಿನ ಮಕ್ಕಳ ಲಸಿಕಾ ಅಭಿಯಾನಕ್ಕೆ ಹಿನ್ನೆಡೆ : ಈವರೆಗೆ ಬೆಂಗಳೂರಿನಲ್ಲಿ ಆಗಿರುವುದು 5% ವ್ಯಾಕ್ಸಿನೇಷನ್ ಮಾತ್ರ!

Next Post

ನಾಳೆಯಿಂದ SSLC ಪರೀಕ್ಷೆ ಆರಂಭ : ಈ ಬಾರಿ 8,73,846 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ನೋಂದಣಿ!

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
SSLC ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ : ಹೀಗಿದೆ ಪಟ್ಟಿ!

ನಾಳೆಯಿಂದ SSLC ಪರೀಕ್ಷೆ ಆರಂಭ : ಈ ಬಾರಿ 8,73,846 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ನೋಂದಣಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada