ಪ್ರಧಾನಿ ಮೋದಿ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.
ಪ್ರಧಾನಿ ಮೋದಿ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟೆಡ್ ಗೆ ಕರೋನಾ ಸೋಂಕು ಧೃಡವಾದ ಹಿನ್ನೆಲೆ ಮೋದಿ ಪ್ರವಾಸ ರದ್ದಾಗಿದೆ. ಮೋದಿ ನಫ್ತಾಲಿ ಬೆನೆಟೆಡ್ ಜೊತೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದರು.
ಏಪ್ರಿಲ್ 05 ರಂದು ಪ್ರಧಾನಮಂತ್ರಿ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದರು. ಏಪ್ರಿಲ್ 5ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ, ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿ ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು.







