ರಾಜ್ಯಸಭೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಸದಸ್ಯರ ಬಲ 100 ದಾಟಿದೆ. ಈ ಮೂಲಕ 1990ರ ನಂತರ ಈ ಸಾಧನೆ ಮಾಡಿದ ಮೊದಲ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಅಸ್ಸಾಂ, ನಾಗಾಲ್ಯಾಂಡ್ ಮತ್ತು ತ್ರಿಪುರದಲ್ಲಿ ತಲಾ ಒಂದು ಸೇರಿದಂತೆ 6 ರಾಜ್ಯಗಳಿಂದ 13 ರಾಜ್ಯಸಭಾ ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ರಾಜ್ಯಸಭೆಯಲ್ಲಿ ಒಟ್ಟಾರೆ ಸದಸ್ಯರ ಬಲ 100 ದಾಟಿದೆ.
ಪಂಜಾಬ್ ನಲ್ಲಿ ಮಾತ್ರ ಬಿಜೆಪಿ ರಾಜ್ಯಸಭಾ ಸ್ಥಾನ ಗೆಲ್ಲಲು ವಿಫಲವಾಗಿದೆ. ಆಮ್ ಆದ್ಮೊ ಪಕ್ಷ ಎಲ್ಲಾ 5 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಇದೇ ವೇಳೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಒಟ್ಟಾರೆ 5 ಸ್ಥಾನ ಕಳೆದುಕೊಂಡಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನರೇಂದ್ರ ಮೋದಿ ನೇತೃತ್ವದಲ್ಲಿ 214 ಸ್ಥಾನ ಗೆದ್ದಿದ್ದರೂ ರಾಜ್ಯಸಭಾ ಸ್ಥಾನ ಗೆಲ್ಲುವಲ್ಲಿ ವಿಫಲವಾಗಿತ್ತು. ಆದರೆ ಇದೀಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ಗೆಲುವಿನಿಂದ ರಾಜ್ಯಸಭಾ ಸ್ಥಾನಗಳ ಸಂಖ್ಯೆ ಹೆಚ್ಚಿಸಿಕೊಂಡಿದೆ.