ರಾಜ್ಯದಲ್ಲಿ ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿವಾದ ನಡುವೆಯೇ ಪಶು ಸಂಗೋಪನಾ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಪಶುಸಂಗೋಪನೆ ಇಲಾಖೆ ಖಡಕ್ ಆದೇಶ ಹೊರಡಿಸಿದ್ದು, ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ.
ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ.
ಪ್ರಾಣಿ ವಧೆಗೂ ಮುನ್ನ ಸ್ಟನಿಂಗ್ ಮಾಡಲು ಸೂಚನೆ ನೀಡಲಾಗಿದ್ದು, ಸ್ಟನ್ನಿಂಗ್ ಸಿಸ್ಟಮ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರಾಣಿ ಹತ್ಯೆಗೂ ಮುನ್ನಾ ಪ್ರಾಣಿಗಳಿಗೆ ಪ್ರಜ್ಞೆ ತಪ್ಪಿಸಬೇಕಾಗುತ್ತದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.
ಆಹಾರಕ್ಕಾಗಿ ಪ್ರಾಣಿವಧೆ ಮಾಡುವಾಗ ಹಿಂಸೆ ನೀಡಬಾರದು. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ ‘ಸ್ಟನ್ನಿಂಗ್’ ಮಾಡುವುದು ಕಡ್ಡಾಯ ಎಂದು ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಉಮಾಪತಿ ತಿಳಿಸಿದ್ದರು. ಪ್ರಾಣಿಗಳಿಗೆ ಹಿಂಸೆ ನೀಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮೀರಿದರೆ 50 ಸಾವಿರದಿಂದ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿತ್ತು.
ಆದರೆ, ಈ ಮಧ್ಯೆ ಇದೀಗ ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ನಮ್ಮ ಇಲಾಖೆಯಿಂದ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಕನ್ನಡದ ಖಾಸಗಿ ಚಾನೆಲ್ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ. ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ಪತ್ರ ಬರೆದಿದ್ದಾರೆ ಅಷ್ಟೇ. ಹಲಾಲ್ ಕಟ್ ಮಾಡಬಾರದು ಎಂದು ಪತ್ರ ಬರೆದಿದ್ದಾರೆ ಅಷ್ಟೇ. ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ. ಪತ್ರದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ ಎಂದು ಪ್ರಭು ಚೌಹಾಣ್ ತಿಳಿಸಿದ್ದಾರೆ.