ಭಾರತೀಯ ಮೂಲದ ಹಾಗೂ ಕನ್ನಡಿಗ ರಿಕ್ಕಿ ಕೇಜ್ 2ನೇ ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದು ಇತಿಹಾಸ ಬರೆದಿದ್ದಾರೆ.
ಭಾನುವಾರ ನಡೆದ 64ನೇ ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡಿಗ ರಿಕ್ಕಿ ಕೇಜ್ ಡಿವೈನ್ ಟೈಡ್ಸ್ ಆಲ್ಬಂಗೆ ನೀಡಿದ ಸಂಗೀತಕ್ಕಾಗಿ ಈ ಗೌರವಕ್ಕೆ ಪಾತ್ರರಾದರು.
ಈ ಮೂಲಕ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ೨ ಬಾರಿ ಗೆದ್ದ ಭಾರತದ ಅತ್ಯಂತ ಕಿರಿಯ ಹಾಗೂ ಒಟ್ಟಾರೆ ೪ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2015ರಲ್ಲಿ ರಿಕ್ಕಿ ಕೇಜ್ ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರಿಗಾಗಿ ರೂಪಿಸಿದ್ದ ವಿಂಡ್ಸ್ ಆಫ್ ಸಂಸಾರ ಹಾಡಿಗೆ ಮೊದಲ ಬಾರಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು.
ಗ್ರ್ಯಾಮಿ ಪ್ರಶಸ್ತಿ ಲಭಿಸಿರುವುದಕ್ಕೆ ಸಂತಸವಾಗಿದೆ. ಕನ್ನಡದ ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಂತಹ ಜೊತೆ ಕೆಲಸ ಮಾಡುವ ಆಸಕ್ತಿ ಇದೆ ಎಂದು ರಿಕ್ಕಿ ಕೇಜ್ ಹೇಳಿಕೊಂಡಿದ್ದಾರೆ. ಇದಕ್ಕೂ ಮೊದಲು ಕನ್ನಡದ ಕೆಲವು ಚಿತ್ರಗಳಿಗೂ ಸಂಗೀತ ನೀಡಿದ್ದಾರೆ.