ಧ್ವನಿವರ್ಧಕಗಳ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು 301 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಧ್ವನಿವರ್ಧಕಗಳ ಶಬ್ಧ ಮಾಲಿನ್ಯ ನಿಯಂತ್ರಣ ಆದೇಶ ಪರಿಪಾಲಿಸಲು ಹಿಂದೆ ಹೈಕೋರ್ಟ್ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.
ಬೆಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ನೀಡಿರುವ ಪೊಲೀಸ್ ಇಲಾಖೆ, ಧ್ವನಿವರ್ಧಕಗಳ ಬಳಕೆಯ ಮಾಹಿತಿ ನೀಡುವಂತೆ ಸೂಚಿಸಿದೆ.
ಧ್ವನಿವರ್ಧಕಗಳ ಬಳಕೆ ನಿಯಮ ಕುರಿತ ಸುಪ್ರೀಂಕೋರ್ಟ್ ಮಾಹಿತಿ ನೀಡಿ ಅವರಿಗೆ ನಿಯಮ ಪಾಲನೆ ಕುರಿತು ತಿಳುವಳಿಕೆ ನೀಡಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.