ಸಿಟಿ ರವಿ ಯಾರದ್ದಾದರೂ ಹೆಣ ಬಿದ್ದರೆ ಅದರಲಿ ರಾಜಕೀಯ ಮಾಡಲು ಕಾಯುತ್ತಿರುತ್ತಾರೆ. ಅವರಿಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದೇ ಕೆಲಸ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಜವಾಬ್ದಾರಿಯಿಂದ ನಡೆದುಕೊಳ್ಳುವ ಬದಲು ರಾಜ್ಯದಲ್ಲಿ ಧರ್ಮದ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದರು.
ಸಿಟಿ ರವಿ ಅವರ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ರಾಜ್ಯದ ಎಲ್ಲೆಡೆ ದೂರುಗಳನ್ನು ದಾಖಲಿಸಲಾಗಿದೆ. ಆದರೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.