ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ. ಅದನ್ನು ರಾಷ್ಟ್ರೀಯ ಭಾಷೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರಕಾರ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುವ ಮೂಲಕ ಸಾಂಸ್ಕೃತಿಕ ಭಯೋತ್ಪಾದನೆ ಮಾಡುತ್ತಿದೆ ಎಂದು ಅವರು ಟ್ವಿಟ್ ಮಾಡಿದ್ದಾರೆ.

ಸಂಸದೀಯ ಭಾಷೆಯಾಗಿ ಯಾವ ಭಾಷೆ ಬಳಸುತ್ತಿದೆ ಅದು ರಾಷ್ಟ್ರೀಯ ಭಾಷೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಕನ್ನಡಿಗನಾಗಿ ನಾನು ಅಮಿತ್ ಶಾ ಅವರ ಹೇಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ ಎಂದರು.






