ಸನ್ ರೈಸರ್ಸ್ ಹೈದರಾಬಾದ್ ಸಂಘಟಿತ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಟಿ-೨೦ ಪಂದ್ಯದಲ್ಲಿ 154 ರನ್ ಗಳ ಸಾಧಾರಣ ಮೊತ್ತ ದಾಖಲಿಸಿದೆ.
ಅಹಮದಾದಾಬ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು.
ಐಪಿಎಲ್ನಲ್ಲಿ ಮಿಂಚುತ್ತಿರುವ ಭಾರತ ತಂಡದ ಭವಿಷ್ಯದ ವೇಗಿಗಳು
ಹೈದರಾಬಾದ್ ಸಂಘಟಿತ ದಾಳಿಗೆ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಚೆನ್ನೈ ಸೂಪರ್ ಕಿಂಗ್ಸ್ ಬೃಹತ್ ಮೊತ್ತ ದಾಖಲಿಸುವಲ್ಲಿ ವಿಫಲವಾಯಿತು. ಮಧ್ಯಮ ಕ್ರಮಾಂಕದಲ್ಲಿ ಮೊಯಿನ್ ಅಲಿ 35ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 48 ರನ್ ಗಳಿಸಿದ್ದಾಗ ಔಟಾಗಿ ಅರ್ಧಶತಕದಿಂದ ವಂಚಿತರಾದರು.

ಮೊಯಿನ್ ಅಲಿ ಹೊರತುಪಡಿಸಿ ಉಳಿದ ಬ್ಯಾಟ್ಸ್ ಮನ್ ಗಳು ದೊಡ್ಡ ಮೊತ್ತದ ಕೊಡುಗೆ ನೀಡಲು ವಿಫಲರಾದರು. ರಾಬಿನ್ ಉತ್ತಪ್ಪ (15), ಋತುರಾಜ್ ಗಾಯಕ್ವಾಡ್ (16), ಅಂಬಟಿ ರಾಯುಡು (27), ಮತ್ತು ನಾಯಕ ರವೀಂದ್ರ ಜಡೇಜಾ (23) ತಕ್ಕಮಟ್ಟಿಗೆ ಹೋರಾಟ ನಡೆಸಿದರು.
ಹೈದರಾಬಾದ್ ಪರ ಟಿ.ನಟರಾಜನ್ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಕಬಳಿಸಿದರೆ ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸನ್ ಮತ್ತು ಏಡಿಯನ್ ಮಾಕರಂ ತಲಾ 1 ವಿಕೆಟ್ ಪಡೆದರು.