ಜಗದ್ವಿಖ್ಯಾತ ತಿರುಮತಿ ತಿಮ್ಮಪ್ಪನ ದರ್ಶನ ಪಡೆಯಲು ಭಕ್ತರ ನಡುವೆ ನೂಕುನುಗ್ಗಲು ಉಂಟಾಗಿದ್ದರಿಂದ ಮೂವರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ತಿರುಮಲದಲ್ಲಿ ಸಂಭವಿಸಿದೆ.
ಸರ್ವದರ್ಶನ ಟಿಕೆಟ್ ಕೌಂಟರ್ ಬಳಿ ಜಮಾಯಿಸಿದ್ದ ಭಕ್ತರ ನಡುವೆ ಟಿಕೆಟ್ ಗಾಗಿ ನೂಕುನುಗ್ಗಲು ಉಂಟಾಗಿದ್ದು, ಒಂದು ಹಂತದಲ್ಲಿ ಕಾಲ್ತುಳಿತಕ್ಕೆ ಒಳಗಾಗುವ ಆತಂಕ ಎದುರಾಗಿತ್ತು.

ಭಕ್ತರು ಒಬ್ಬರಿಗೊಬ್ಬರು ತಳ್ಳಾಟ ನಡೆಸಿದ್ದರಿಂದ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಪರದಾಡಬೇಕಾಯಿತು ಎಂದು ತಿಳಿದು ಬಂದಿದೆ.






