ರಾಜಸ್ಥಾನದ ಹಿಂಸಾಚಾರ ಪೀಡಿತ ಕರೌಲಿ ಜಿಲ್ಲೆಗೆ ಬೇಟಿ ನೀಡಲು ಮುಂದಾಗಿದ್ದ ಬೆಂಗಳೂರು ದಕ್ಷಿಣ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾದ ತೇಜಸ್ವಿ ಸೂರ್ಯ ನೇತೃತ್ವದ ನಿಯೋಗವನ್ನು ಪೊಲೀಸರು ತಡೆದ ಕಾರಣ ಸ್ಥಳದಲ್ಲೇ ಧರಣಿ ಕುಳಿದ ನಿಯೋಗ ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.
ಜಿಲ್ಲೆ ಪ್ರವೇಶ ನಿರ್ಬಂಧಿಸಿದ ಪೊಲೀಸರ ಹಾಗೂ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದೆ. ಸಂಸದ ತೇಜಸ್ವಿ ಸೂರ್ಯ ಧರಣಿ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಏಪ್ರಿಲ್ 2ರಂದು ಯುಗಾದಿ ಹಬ್ಬದ ವಿಶೇಷವಾಗಿ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟವಾದ ಕಾರಣ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ 35ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿತ್ತು.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಯುವ ಮೋರ್ಚಾ ನೀವು ಹಾಗೂ ನಿಮ್ಮ ಸೋನಿಯಾ ಸೇನೆಯೂ ಸರ್ವಾಧಿಕಾರ ಹಾಗೂ ಹಿಂದೂಫೋಬಿಯಾವನ್ನು ಪ್ರಶ್ನಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದೆ.






