• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಂಡತನ ಪ್ರದರ್ಶನ ಮಾಡದೇ ಈಶ್ವರಪ್ಪ ರಾಜೀನಾಮೆ ನೀಡಬೇಕು : ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 14, 2022
in ಕರ್ನಾಟಕ
0
ಬಂಡತನ ಪ್ರದರ್ಶನ ಮಾಡದೇ ಈಶ್ವರಪ್ಪ ರಾಜೀನಾಮೆ ನೀಡಬೇಕು : ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ
Share on WhatsAppShare on FacebookShare on Telegram

ಕಮಿಷನ್ ವಿಚಾರವಾಗಿ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ ಎಂದು ಬಂಡತನ ತೋರುತ್ತಿರುವುದು ಆ ಪಕ್ಷಕ್ಕೆ ತಿರುಗುಬಾಣವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು.

ADVERTISEMENT

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ  ರೈಲ್ವೆ ನಿಲ್ದಾಣದ ಬಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಪ್ರಕರಣದ ನೈತಿಕ ಹೊಣೆಹೊತ್ತು ಸಚಿವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೇ ರಾಜ್ಯಾದ್ಯಂತ ಕಾಂಗ್ರೆಸ್ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.‌

ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ದಕ್ಷ ಪೋಲಿಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಅಂದಿನ ಗೃಹ ಸಚಿವರಾಗಿದ್ದ ಕೆ.ಜೆ.ಚಾರ್ಜ್ ಅವರು ನೈತಿಕ ಹೊಣೆಹೊತ್ತು. ಏಕಾಏಕಿ ರಾಜೀನಾಮೆ ಕೊಟ್ಟಿದ್ದರು‌. ಆ ಬಳಿಕ ತನಿಖೆ ನಂತರವೇ ಸಚಿವ ಸ್ಥಾನವನ್ನು ಅಲಂಕಾರ ಮಾಡಿದರು. ಆದರೆ ಅಂತರ ಧೈರ್ಯ ತೋರುವ ತಾಕತ್ತು ಬಿಜೆಪಿಯವರಿಗೆ ಇಲ್ಲ. ಬಿಜೆಪಿಯವರು ಮಾತಾಡೋದು ಒಂದು, ಮಾಡೋದು ಒಂದು. ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ರಾಜ್ಯಕ್ಕೆ ಬಂದಾಗ ಯಾವುದೇ ಆಧಾರವಿಲ್ಲದೇ ಕಾಂಗ್ರೆಸ್ ಸರ್ಕಾರ 10% ಕಮಿಷನ್ ಸರ್ಕಾರ ಎಂದು ಆರೋಪಿಸಿದರು. ಆದರೆ ಇವತ್ತು ರಾಜ್ಯದಲ್ಲಿ 40% ಕಮಿಷನ್ ಸರ್ಕಾರ ಪಡೆಯುತ್ತಿದೆ‌. ಇದನ್ನು ಸ್ವತಃ ಗುತ್ತಿಗೆದಾರರೇ ಬಿರುದು ನೀಡಿದ್ದಾರೆ. ಹಾಗಾಗಿ ಬಿಜೆಪಿಗೆ ನಾಚಿಕೆ ಆಗಬೇಕು. ಅವರಿಗೆ ಮಾನ ಮರ್ಯಾದೆ ಇದ್ದರೆ, ರಾಜೀನಾಮೆ ಕೊಟ್ಟು ಜನರ ಎದುರಿಗೆ ಹೋಗಬೇಕು ಎಂದು ಒತ್ತಾಯಿಸಿದರು.

ಬಿಜೆಪಿಗರ ಅಜೆಂಡಾ ಒಂದೇ, ಅವರ ಬಂಡವಾಳವೇ ಜಾತಿ-ಧರ್ಮ. ಅವರ ಮುಂದೆ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಧರ್ಮದ ದಂಗಲ್ ಗೆ ನೇರ ಕಾರಣ ಬಿಜೆಪಿಯವರು. ಆರ್.ಎಸ್.ಎಸ್‌, ಬಜರಂಗಗಳು ಬಿಜೆಪಿಯ ಅಂಗಗಳು. ಅವರ ಮೂಲಕ ರಾಜ್ಯ, ದೇಶದಲ್ಲಿ ಅಶಾಂತಿ ಉಂಟುಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

Tags: BJPCongress PartyCovid 19ಈಶ್ವರಪ್ಪಕೆ ಎಸ್ ಈಶ್ವರಪ್ಪನರೇಂದ್ರ ಮೋದಿಪ್ರಸಾದ್ ಅಬ್ಬಯ್ಯಬಿಜೆಪಿರಾಜೀನಾಮೆಸಚಿವ ಈಶ್ವರಪ್ಪ
Previous Post

ಕೆಜಿಎಫ್-‌2ಗೆ ಪೈರಸಿ ಕಾಟ; ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ!

Next Post

ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada