• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
April 14, 2022
in ಕರ್ನಾಟಕ
0
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಗುತ್ತಿಗೆದಾರ ಸಂತೋಷ್‌ ಸಾವಿನ ಹಿಂದೆ ಅನೇಕ ಅನುಮಾನಗಳು ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ADVERTISEMENT

ಚನ್ನಪಟ್ಟಣದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇವತ್ತು ಅಥವಾ ನಾಳೆ ರಾಜೀನಾಮೆ ಕೊಡಬಹುದು. ಅವರ ಹೈಕಮಾಂಡ್ ಈ ಬಗ್ಗೆ ಹೇಳುತ್ತಾರೆ ಅನ್ನಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಮೊದಲು ಅವರು ರಾಜೀನಾಮೆ ನೀಡುವುದು ಸೂಕ್ತ” ಎಂದರು.

ಸಂತೋಷ್ ಸಾವಿನ ಹಿಂದೆ ಹಲವಾರು ಸಂಶಯಗಳಿವೆ.‌ ಜನರಲ್ಲಿ ಅನೇಕ ಪ್ರಶ್ನೆಗಳೂ ಇವೆ. ಸತ್ಯಾಂಶವನ್ನು ಹೊರ ತರಲು ತನಿಖೆಯಾಗಬೇಕು. ಇದು ಸರಕಾರದ ಜವಾಬ್ದಾರಿ ಎಂದು ಅವರು ಹೇಳಿದರು.

ಮೃತ ವ್ಯಕ್ತಿ ನಾಲ್ಕು ಕೋಟಿ ರೂಪಾಯಿ ಕಾಮಗಾರಿ ಸರಕಾರದ ಕಾರ್ಯಾದೇಶ ಇಲ್ಲದೆ, ವರ್ಕ್ ಎಸ್ಟಿಮೇಟ್‌‌ ಇಲ್ಲದೇ ಕೆಲಸ ಮಾಡಿದ್ದು ಹೇಗೆ? ಅವರಿಗೆ ಕಾಮಗಾರಿ ಮಾಡಲು ಅನುಮತಿ ಕೊಟ್ಟವರು ಯಾರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಯಾವ ಎಂಜಿನಿಯರ್ ಅಥವಾ ಸರಕಾರಿ ಸಂಸ್ಥೆ ಗಮನಕ್ಕೆ ಬಾರದೇ ಪೇಮೆಂಟ್ ನೀಡಬೇಕು ಎಂದರೆ ತಾಂತ್ರಿಕ ಸಮಸ್ಯೆ ಇದೆ. ಇದರ ನಡುವೆ ಪರ್ಸೆಂಟೆಜ್ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ. ಈ ಕಾರಣಕ್ಕೆ ಸಂತೋಷ್ ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ಇವೆ. ಅಲ್ಲದೆ, ಮೃತ ವ್ಯಕ್ತಿಯ ಜತೆ ಇಬ್ಬರು ಸ್ನೇಹಿತರು ಹೋಗಿದ್ದರು ಎಂದ ಅವರು; ಸಂತೋಷ್ ಮಾತ್ರ ಒಂದು ಕೊಠಡಿಗೆ ಹೋಗಿದ್ದಾರೆ, ಉಳಿದ ಇಬ್ಬರು ಒಂದು ಕೊಠಡಿಗೆ ಏಕೆ ಹೋಗಿದ್ದರು? ಇವರೆಲ್ಲ ಉಡುಪಿಗೆ ಏಕೆ ಹೋಗಿದ್ದರು? ಸರಕಾರವು ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳನ್ನು ನೇಮಿಸಿ ಹಾಕಿ ತನಿಖೆ ನಡೆಸಿದರೆ ಸತ್ಯಾಸತ್ಯತೆ ಹೊರಬರುತ್ತದೆ ಎಂದರು.

ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿಗೆ ತರಾಟೆ:

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಕೊಲೆಯಾದ ಸಂದರ್ಭದಲ್ಲಿ ಬಿಜೆಪಿ ದಂಡೇ ಅಲ್ಲಿಗೆ ಹೋಯಿತು. ಅದಕ್ಕೆ ನಾವೇನು ಕಡಿಮೆ ಎಂದು ಸಾವಿನ ರಾಜಕಾರಣ ಮಾಡಲಿಕ್ಕೆ ಕಾಂಗ್ರೆಸ್‌ನ ನಾಯಕರ ದಂಡೇ ಈಗ ಸಂತೋಷ ಅವರ ಮನೆಗೆ ದಾಂಗುಡಿ ಇಟ್ಟಿದೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ನಾಯಕರೆಲ್ಲ ಕೈಕಟ್ಟಿ ಆ ಸಂತ್ರಸ್ತ ಹೆಣ್ಣುಮಗಳ ಮುಂದೆ ಕುಳಿತ ದೃಶ್ಯಗಳನ್ನು ನೋಡಿದರೆ ರಾಜಕೀಯ ಲಾಭ ಮಾಡಿಕೊಳ್ಳುವ ಉದ್ದೇಶ ಬಿಟ್ಟರೆ ಬೇರೇನೂ ಕಾಣದು ಎಂದು ಕುಮಾರಸ್ವಾಮಿ ಅವರು ಸಂಶಯ ವ್ಯಕ್ತಪಡಿಸಿದರು.

ಈಶ್ವರಪ್ಪರ ಬಗ್ಗೆ ನಾನೇಕೆ ಸಾಪ್ಟ್ ಆಗಲಿ. ನನಗೆ ಯಾವ ರೀತಿಯ ಸಾಫ್ಟ್‌ ಕಾರ್ನರ್‌ ಇಲ್ಲ. ಅವರ ಮೇಲೆ ಆರೋಪ ಬಂದಿದೆ. ಮೊದಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಗುತ್ತಿಗೆದಾರ ಸಂತೋಷ್‌ಚ್.ಡಿ. ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಎಲ್ ಸಂತೋಷ್‌ಬಿಜೆಪಿಸಿದ್ದರಾಮಯ್ಯ
Previous Post

ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

Next Post

ಬಾಹುಬಲಿ ದಾಖಲೆ ಮುರಿದ ಕೆಜಿಎಫ್-‌2

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಬಾಹುಬಲಿ ದಾಖಲೆ ಮುರಿದ ಕೆಜಿಎಫ್-‌2

ಬಾಹುಬಲಿ ದಾಖಲೆ ಮುರಿದ ಕೆಜಿಎಫ್-‌2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada