ರಾಜ್ಯ ರಾಜಕರಾಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರದ ಸಚಿವರನ್ನು ಕೇಂದ್ರಿಯ ತನಿಖಾ ಸಂಸ್ಥೆಯ ಅಧೀನಕ್ಕೆ ಒಳಪಡಿಸಿದರೆ ಶೇ.60ಕ್ಕಿಂತ ಹೆಚ್ಚಿನ ಜೈಲು ಸೇರುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.
ಪಕ್ಷ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ದಯವಿಟ್ಟು ಇಂತಹ ಅಂಶಗಳನ್ನು ಪಕ್ಷದಿಂದ ಶುದ್ಧೀಕರಿಸಿ ಎಂದು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಸದ್ಯದ ಮಟ್ಟಿಗೆ ಮಾಜಿ ಅಧಿಕಾರಿಯ ಟ್ವೀಟ್ ಸಂಚಲನ ಮೂಡಿಸಿದ್ದು ಇದಕ್ಕೆ ಬಿಜೆಪಿ ವರಿಷ್ಠರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.