ಬೆಂಗಳೂರು ನಗರದ ಬ್ಯಾಟರಾಯನಪುರದಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಎಸಿ ಸ್ಪೋಟಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಬ್ಯಾಟರಾಯನಪುರದ ಮೂರನೇ ಮಹಡಿಯಲ್ಲಿರುವ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಎಸಿ ಸ್ಪೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಸ್ಥಳಕ್ಕೆ ದೌಡಾಯಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.