ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪ್ರಚೋದನಕಾರಿ ಪೋಸ್ಟ್ ನಿಂದ ಹಳೇ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 80ಕ್ಕೇರಿದೆ.
ಶನಿವಾರ ರಾತ್ರಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಸೇರಿದಂತೆ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಸಾಚಾರ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ನಿನ್ನೆ 48 ಮಂದಿಯನ್ನು ವಶಕ್ಕೆ ಪಡೆದಿದ್ದರು. ಇದೀಗ ಬಂಧಿತರ ಸಂಖ್ಯೆ 80ಕ್ಕೇರಿದೆ.
ಘಟನೆ ಸಂಬಂಧ ಪೊಲೀಸರು ೭ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.






