ಕರ್ನಾಟಕ ಸರ್ಕಾರವು ಕೇವಲ ಗುತ್ತಿಗೆದಾರರಿಂದ ಮಾತ್ರವಲ್ಲ, ಮಠಾಧೀ ಶರಿಂದಲೂ ಪರ್ಸೆಂಟೇಜ್ ಕೇಳುತ್ತಿದೆ ಎಂದು ಬಾಗಲಕೋ ಟೆ ಜಿಲ್ಲೆ ಬೀಳಗಿತಾಲ್ಲೂ ಕಿನಬಾಳಗಂಡಿಯಲ್ಲಿ ಶಿರಹಟ್ಟಿ ಫಕೀ ರ ದಿಂಗಾಲೇಶ್ವರ ಸ್ವಾಮೀ ಜಿ ಹೇಳಿಯನ್ನು ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ.
ಸಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ಟ್ವೀಟ್ ಮಾಡಿದ್ದಾರೆ.
ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ. ರಾಜ್ಯ ಬಿಜೆಪಿ ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ಸರ್ಕಾರವು ಕೇವಲ ಗುತ್ತಿಗೆದಾರರಿಂದ ಮಾತ್ರವಲ್ಲ, ಮಠಾಧೀ ಶರಿಂದಲೂ ಪರ್ಸೆಂಟೇಜ್ ಕೇಳುತ್ತಿದೆ. ಮಠಗಳು ಶೇ30ರ ಪರ್ಸೆಂಟೇಜ್ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ’ ಎಂದು ಬಾಗಲಕೋ ಟೆ ಜಿಲ್ಲೆ ಬೀಳಗಿತಾಲ್ಲೂ ಕಿನಬಾಳಗಂಡಿಯಲ್ಲಿ ಶಿರಹಟ್ಟಿ ಫಕೀ ರ ದಿಂಗಾಲೇಶ್ವರ ಸ್ವಾಮೀ ಜಿ ಆರೋಪ ಮಾಡಿದರು .






