ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಏರಿಕೆಯಾಗುತ್ತಿದ್ದು ಈ ಮಧ್ಯೆ ಇತ್ತೀಚಿಗೆ ದೆಹಲಿ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.
ಈಗ ಇದೇ ಆದೇಶವನ್ನು ಪಂಜಾಬ್ ಸರ್ಕಾರ ಜಾರಿಗೊಳಿಸಿದೆ. ಈ ಕುರಿತು ಆದೇಶವನ್ನು ಹೊರಡಿಸಿರುವ ಪಂಅಜಬ್ ಸರ್ಕಾರ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯದ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ.
