ಲಕ್ನೋ ಸೂಪರ್ ಗೈಂಟ್ಸ್ ತಂಡದ ಸಾರಥ್ಯ ವಹಿಸಿರುವ ಕರ್ನಾಟಕದ ಯುವ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಟಿ-20 ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 6000 ರನ್ ಪೂರೈಸುವ ಮೂಲಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ದಾಖಲೆ ಮುರಿದಿದ್ದಾರೆ.
ಟಿ-20 ಕ್ರಿಕೆಟ್ ನಲ್ಲಿ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಮತ್ತು ಪಾಕಿಸ್ತಾನದ ಬಾಬರ್ ಅಜಮ್ ನಂತರ ಅತ್ಯಂತ ವೇಗವಾಗಿ 6000 ರನ್ ಪೂರೈಸಿದ ಮೂರನೇ ಆಟಗಾರ ಎಂಬ ಆಟಗಾರ ಎಂಬ ದಾಖಲೆಗೆ ರಾಹುಲ್ ಪಾತ್ರರಾದರು.
ರಾಯಲ್ ಚಾಲೆಂಜರ್ಸ್ ವಿರುದ್ಧದ ಪಂದ್ಯದಲ್ಲಿ 24 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದರು. ರಾಹುಲ್ ೬೦೦೦ ರನ್ ಗಡಿ ದಾಟಲು 166 ಪಂದ್ಯಗನ್ನು ತೆಗೆದುಕೊಂಡರು.
ವಿರಾಟ್ ಕೊಹ್ಲಿ 148 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದರೆ ಶಿಖರ್ ಧವನ್ 231 ಪಂದ್ಯಗಳಲ್ಲಿ 6000 ರನ್ ಪೂರೈಸಿದ್ದಾರೆ. ಒಟ್ಟಾರೆಯಾಗಿ ಅಗ್ರಸ್ಥಾನದಲ್ಲಿರುವ ಕ್ರಿಸ್ ಗೇಲ್ 162 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಜಾಮ್ 165 ಪಂದ್ಯಗಳಲ್ಲಿ ಈ ದಾಖಲೆ ಬರೆದು 2ನೇ ಸ್ಥಾನದಲ್ಲಿದ್ದಾರೆ.