ನಾಯಕ ಹಾರ್ದಿಕ್ ಪಾಂಡ್ಯ ಅರ್ಧಶತಕದ ಹೊರತಾಗಿಯೂ ಕೋಲ್ಕತಾ ನೈಟ್ ರೈಡರ್ಸ್ ಆಲ್ ರೌಂಡರ್ ಆಂಡ್ರೆ ರಸೆಲ್ ಮಾರಕ ದಾಳಿಗೆ ತತ್ತರಿಸಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಗೆ 156 ರನ್ ಗಳಿಸಿದೆ.
ಅಹಮದಾಬಾದ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ತಂಡ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಅನುಭವಿಸಿತು.

ಹಾರ್ದಿಕ್ ಪಾಂಡ್ಯ ಮತ್ತು ವೃದ್ಧಿಮಾನ್ ಸಾಹ (25) ಎರಡನೇ ವಿಕೆಟ್ ಗೆ 75 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಆಧರಿಸಿದರು. ಹಾರ್ದಿಕ್ ಪಾಂಡ್ಯ 49 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 67 ರನ್ ಗಳಿಸಿ ಔಟಾದರು. ನಂತರ ಡೇವಿಡ್ ಮಿಲ್ಲರ್ (27) ಕೂಡ ನೆಲಕಚ್ಚಿ ಆಡುವ ಹಂತದಲ್ಲಿ ವಿಕೆಟ್ ಕೈಚೆಲ್ಲಿದರು.
ಕೆಕೆಆರ್ ಪರ ರಸೆಲ್ 4 ವಿಕೆಟ್ ಪಡೆದರೆ, ಟಿಮ್ ಸೌಥಿ 3 ವಿಕೆಟ್ ಕಬಳಿಸಿದರು.






