• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

PSI ನೇಮಕಾತಿ ಹಗರಣದ ಬಗ್ಗೆ ಮಾತಾಡಿದ್ರೆ ನನಗೆ ನೋಟಿಸ್ ಕೊಡ್ತಿರಾ? : ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Any Mind by Any Mind
April 25, 2022
in ಕರ್ನಾಟಕ
0
PSI ನೇಮಕಾತಿಯಲ್ಲಿ ಅಕ್ರಮ : ಯುವಜನರ ಕನಸು ನುಚ್ಚು ನೂರು ಮಾಡಿದ ಬಿಜೆಪಿ ಸರ್ಕಾರ!
Share on WhatsAppShare on FacebookShare on Telegram

ADVERTISEMENT

PSI ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ದಾಖಲೆ ಸಮೇತ ಒಂದಷ್ಟು ಮಾಹಿತಿ ನೀಡಿ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಶಾಸಕ ಪ್ರಿಯಾಂಕಾ ಖರ್ಗೆ ಅವರೆಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಕುರಿತು ಇಂದು ಪತ್ರಿಕ್ರಿಯಿಸದ ಪ್ರಿಯಾಂಕ್ ಅವರು ತನಿಖಾ ಸಂಸ್ಥೆಗಳು ಅವರ ಕೈಲಿದೆ ಎಂದು ಏನುಬೇಕಾದರು ಮಾಡೊಕ್ ಆಗಲ್ಲ. ನಾನು ಆರೋಪಿಯಲ್ಲ ಏನು ಅಲ್ಲ ನನಗೆ ಏಕೆ ನೋಟಿಸ್ ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಕೆಪಿಸಿಸಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರ ಮಸಿ ಬಳಿದುಕೊಂಡಿದೆ. ಅವರ ಹಗರಣವನ್ನು ಬಹಿರಂಗ ಮಾಡಿದಕ್ಕೆ ನನಗೆ ನೋಟಿಸ್ ನೀಡಿದ್ದಾರೆ. ಈ ಪ್ರಕರಣಕ್ಕು ನನಗೂ ಏನು ಸಂಬಂಧ. ಈ ಅಕ್ರಮದ ಹಿಂದೆ ಬೇರೆ ಕೈಗಳೇ ಇವೆ ಅವರನ್ನು ಬಿಟ್ಟು ನನಗೆ ನೋಟಿಸ್ ನೀಡಿದ್ದಾರೆ. ಈತರ ನೇಮಕಾತಿ ಮಾಡಿದ ಎಷ್ಟು ಜನರಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ನಾನು ನೀಡಿರುವ ಮಾಹಿತಿ ಇಲ್ಲಿ ಲಭ್ಯವಿಲ್ಲ ಎಂದು ಅಧಿಕಾರಿಗಳು ಹೇಳ್ತಿದ್ದೀರೆ ಅದಕ್ಕೆ ನನಗೆ ಆಶ್ಚರ್ಯವಾಗುತ್ತಿದೆ. ನಾನು ಸಾರ್ವಜನಿಕವಾಗಿ ಇರುವ ಮಾಹಿತಿಯನ್ನೇ ನೀಡಿದ್ದೇನೆ. ನಾನು ಎಲ್ಲಿಯಾದರೂ ಸ್ಟಿಂಗ್ ಮಾಡಿದ್ದೇನೆ, ತನಿಖಾ ವರದಿ ಮಾಡಿದ್ದೇನೆ, ಸಾರ್ವಜನಿಕ ವಲಯದಲ್ಲಿ ಬಿಟ್ಟು ಬೇರೆ ಮಾಹಿತಿ ನೀಡುತಿದ್ದೇನೆ ಎಂದು ಎಲ್ಲಿಯಾದರೂ ಹೇಳಿದ್ದೇನೆಯೇ ಇಲ್ಲ ಆದರೆ ಇವರು ನನಗೆ ನೋಟಿಸ್ ನೀಡ್ತಾರಲ್ಲ ಎಷ್ಟು ಸರಿ. ಆರೋಪಿ ದಿವ್ಯ ಮನೆಗೆ ಹೋದ ಗೃಹ ಸಚಿವರಿಗೆ ನೋಟಿಸ್ ನೀಡಿ, ಎಂದು ಹೇಳಿದ್ದಾರೆ.

ನೋಟಿಸ್ ನಲ್ಲಿ ಏನಿದೆ ?

ಪ್ರಿಯಾಂಕ ಖರ್ಗೆ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಐಡಿ ಪೊಲೀಸರು, ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಕಲಂ 90/160 ಅಡಿ ಪೊಲೀಸ್ ನೋಟಿಸ್ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸಾಕ್ಷ್ಯಾಧಾರಗಳು ಇರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುತ್ತೀರಿ. ಈ ಪ್ರಕರಣ ಸೂಕ್ಷ್ಮ ವಾಗಿರುವುದರಿಂದ ತಮ್ಮ ಬಳಿಯಿರುವ ಸಾಕ್ಷ್ಯಾಧಾರಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅನಿವಾರ್ಯವಾಗಿದೆ.

ಹೀಗಾಗಿ ಸದರಿ ದಾಖಲೆಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಸಾಕ್ಷ್ಯಾಧಾರಗಳನ್ನು ಹಾಗೂ ದಾಖಲೆಗಳನ್ನು ಏ. 25 ರಂದು ಸಿಐಡಿ ಕಚೇರಿಯಲ್ಲಿರುವ ಸಹಾಯಕ ತನಿಖಾಧಿಕಾರಿಗಳ ಸಮಕ್ಷಮ ಸಲ್ಲಿಸುವಂತೆ ಸೂಚಿಸಿದೆ ಎಂದು ಸಹಾಯಕ ತನಿಖಾಧಿಕಾರಿ ಪಿ.ನರಸಿಂಹಮೂರ್ತಿ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಆರೋಪ : ಹಿಂದೂ ಪರ ಸಂಘಟನೆಗಳಿಂದ ಮತ್ತೊಂದು ವಿವಾದ!

Next Post

ನಿಮ್ಮ ಬೆದರಿಕೆಗೆ ನಾವು ಜಗ್ಗುವುದಿಲ್ಲ : ಪ್ರಿಯಾಂಕ್ ಖರ್ಗೆ ಬೆನ್ನಿಗೆ ನಿಂತ ಸಿದ್ದರಾಮಯ್ಯ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!

ನಿಮ್ಮ ಬೆದರಿಕೆಗೆ ನಾವು ಜಗ್ಗುವುದಿಲ್ಲ : ಪ್ರಿಯಾಂಕ್ ಖರ್ಗೆ ಬೆನ್ನಿಗೆ ನಿಂತ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada