ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ.
ಅಂಗನವಾಡಿಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದು ಸರ್ಕಾರಗಳ ಒಂದು ಭಾಗವಾಗಿದೆ. ಹೀಗಾಗಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರಾಗಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್.ಓಕಾ ಅವರಿದ್ದ ಪೀಠವು ಅಭಿಪ್ರಾಯಪಟ್ಟಿತು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಸೆಕ್ಷನ್ 11 ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ವಯವೂ ಅಂಗನವಾಡಿ ಕೇಂದ್ರಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಅದರ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ ಅಡಿಯಲ್ಲಿ ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.