ರಾಜಸ್ಥಾನದ ಅಲ್ವಾರ್ನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ಕೆಡೆವುತ್ತಿರುವುದನ್ನು ವಿರೋಧಿಸಿ ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವಾರು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಈ ಕುರಿತು ಮಾತನಾಡಿದ ಬಿಜೆಪಿ ಸಂಸದ ಬಾಲಕನಾಥ್ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಹಿಂದೂಗಳ ವಿರುದ್ದ ದ್ವೇಷ ರಾಜಕಾರಣ ಮಾಡುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಗೆಹ್ಲೋಟ್ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಈ ವೇಳೆ ಒತ್ತಾಯಿಸಿದ್ದಾರೆ.
ಕಳೆದ ವಾರ ಅಲ್ವಾರ್ ಜಿಲ್ಲೆಯ ರಾಜ್ಗಢ್ದಲ್ಲಿ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಹಾಗೂ ಸರ್ಕಾರ ರಸ್ತೆ ಅಗಲೀಕರಣದ ಹೆಸರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ಕೆಡವಿತ್ತು.