ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಅವಧಿಗೂ ಮುನ್ನವೇ ಬೇಸಿಗೆ ರಜೆ ಆರಂಭಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಬುಧವಾರ ಪ್ರಕಟಿಸಿದೆ.
ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮತ್ತು ಬಿಸಿಗಾಳಿಯಿಂದಾಗಿ ಶಾಲಾ ಮಕ್ಕಳಿಂದಿಡಿದು ರಾಜ್ಯದ ಜನರು ತತ್ತರಿಸುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ರಾಜ್ಯ ಸಚಿವಾಲಯದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಶಾಲೆಗೆ ಬೇಸಿಗೆ ರಜವನ್ನು ಮುಂಚಿತವಾಗಿಯೇ ನೀಡುವ ನಿರ್ಧಾರವನ್ನು ಕೈಕೊಂಡಿದ್ದು, ಮೇ 2 ರಿಂದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಬೇಸಿಗೆ ರಜೆ ನೀಡಿರುವುದಾಗಿ ಪ.ಬಂ ಸರ್ಕಾರ ಹೇಳಿದೆ.










