ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತಮ್ಮದೇ ನೇತೃತ್ವದಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದು ನಾಳೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಹಲವು ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ಮಾಡಿಕೊಡುತ್ತಾ ಬಂದಿದ್ದ ಪ್ರಶಾಂತ್ ಕಿಶೋರ್ ರಾಜಕೀಯ ಪಕ್ಷವನ್ನೇ ಸ್ಥಾಪಿಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ತಂತ್ರಗಾರಿಕೆ ಮಾಡಿಕೊಟ್ಟರೂ ಕೊನೆ ಗಳಿಗೆಯಲ್ಲಿ ಪಕ್ಷ ಸೇರ್ಪಡೆ ಆಹ್ವಾನವನ್ನು ಪ್ರಶಾಂತ್ ಕಿಶೋರ್ ತಿರಸ್ಕರಿಸಿದ್ದರು. ಇದೀಗ ತಮ್ಮ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.