545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜ್ಞಾನಜ್ಯೋತಿ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ಸಿಐಡಿಗೆ ಶರಣಾಗಿದ್ದಾರೆ.
ಈಗಾಗಲೇ ಸಿಐಡಿ ವಶದಲ್ಲಿರುವ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಪೊಲೀಸರು ಕಳೆದ ವಾರ ಪುಣೆಯಲ್ಲಿ ಬಂಧಿಸಿದ್ದರು. ವಿಚಾರಣೆ ವೇಳೆ ದಿವ್ಯಾ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ಯೋಜನೆ ರೂಪಿಸಿದ್ದು ಎಂದು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಕಾಶಿನಾಥ್ ಶರಣಾಗಿದ್ದಾರೆ.
ಪ್ರಕರಣದ ಮುಖ್ಯ ಆರೋಪಿಗಳಾದ ಜಲಸಂಪನ್ಮೂಲ ಇಲಾಖೆಯ ಎಇ ಮಂಜುನಾಥ ಮೇಳಕುಂದಿ ಭಾನುವಾರ ಸಿಐಡಿಗೆ ಶರಣಾಗಿದ್ದರು. ಪ್ರಕರಣ ಬಯಲಿಗೆ ಬರಲು ಮುಖ್ಯ ಕಾರಣ ಎಂದು ಹೇಳಲಾಗಿದ್ದ ಶ್ರೀಧರ್ ಪವಾರ್ನನ್ನು ಭಾನುವಾರ ಬಂಧಿಸಲಾಗಿತ್ತು.
