ಕರ್ನಾಟಕದ ಶಿಖರ ಎಂದೇ ಖ್ಯಾತಿ ಪಡೆದಿರುವ ಕುಂದಾನಗರಿ ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಎಂಇಎಸ್ ಕಾರ್ಯಕರ್ತರ ಹಾವಳಿ ಜಾಸ್ತಿಯಾಗುತ್ತಿದೆ.
ಇಷ್ಟು ದಿನ ಬಾಲ ಸುಮ್ಮನಿದ್ದು ಈಗ ಮತ್ತೆ ಗಡಿ ವಿವಾದವನ್ನು ಮುನ್ನೆಲೆಗೆ ತಂದಿರುವ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದ ಗಡಿ ಬಗ್ಗೆ ಈಗಾಗಲೇ ಎಲ್ಲವು ನಿರ್ಣಯವಾಗಿದೆ. ನಮ್ಮ ನಿಲುವು ಸ್ಪಷ್ಟವಾಗಿದೆ ನಾವು ಒಂದಿಂಚು ಜಾಗ ಬಿಡುವ ಪ್ರಶ್ನೆಯಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದಾಗಲೆಲ್ಲ ಗಡಿ ವಿವಾದವನ್ನು ಮುನ್ನೆಲೆಗೆ ತರುತ್ತಾರೆ. ಅವರುಗಳ ರಾಜಕೀಯ ಉಳಿವಿಗಾಗಿ ಭಾಷೆ ಹಾಗು ಗಡಿ ವಿಚಾರವನ್ನ ಮುನ್ನೆಲೆಗೆ ತರುವುದು ಅವರ ಸಣ್ಣತನವನ್ನು ಎತ್ತಿ ತೋರಿಸುತ್ತದೆ. ಕೂಡಲೇ ಈ ವಿಚಾರವನ್ನ ಕೈಬಿಡಬೇಕು. ಇಲ್ಲವಾದಲ್ಲಿ ಕನ್ನಡ ಭಾಷಿಕರಿರುವ ಹಲವಾರು ಪ್ರದೇಶಗಳು ಮಹಾರಾಷ್ಟ್ರದಲ್ಲಿದೆ ಅದನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ನಾವು ಯೋಚಿಸುತ್ತುದ್ದೇವೆ ಎಂದು ಎಚ್ಚರಿಸಿದ್ದಾರೆ.