ಮಹಾರಾಷ್ಟ್ರ ಮುಖ್ಯಮಂತ್ರಿ ನಿವಾಸದೆದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಶಾಸಕ ರವಿ ರಾಣಾ ಹಾಗೂ ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಏಪ್ರಿಲ್ 23 ಶನಿವಾರದಂದು ಬಂಧನಕ್ಕೊಳಗಾಗಿದ್ದ ರಾಣಾ ದಂಪತಿಗಳ ವಿರುದ್ದ ದೇಶದ್ರೋಹ ಪ್ರಕರಣವನ್ನ ಪೊಲೀಸರು ದಾಖಲಿಸಿದ್ದರು ಮತ್ತು ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯ ದಂಪತಿಗಳನ್ನು 14ದಿನ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿತ್ತು.
ರಾಣಾ ದಂಪತಿಗಳ ಪರ ವಕೀಲರು ಬಂಧನವನ್ನ ಪ್ರಶ್ನಿಸಿ ಸೆಷನ್ಸ್ ಕೋರ್ಟ್ಗೆ ಮನವಿ ಸಲಲಿಸಿದ್ದರು ಮನವಿ ಪುರಸ್ಕರಿಸಿದ್ದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮಧ್ಯೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ತಗೆಯದಿದ್ದರೆ ತಮ್ಮ ಪಕ್ಷದ ಕಾರ್ಯಕರ್ತರು ಮಸೀದಿಗಳ ಮುಂದೆ ದಿನಕ್ಕೆ 5 ಭಾರೀ ಹನುಮಾನ್ ಚಾಲೀಸಾ ಪಠಿಸುವುದಾಗಿ ಸರ್ಕಾರವನ್ನು ಎಚ್ಚರಿಸಿದ್ದಾರೆ.
