ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶೀಘ್ರ ವೇತನ ಹೆಚ್ಚಳ ಮಾಡುವ ಬಗ್ಗೆ ಹಣಕಾಸು ಇಲಾಖೆ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಶಿವಮೊಗ್ಗದ ಶಿರಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸಾರಿಗೆ ಸಿಬ್ಬಂದಿಗೆ ಶೀಘ್ರ ವೇತನ ಹೆಚ್ಚಳದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಕುರಿತು ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು, ಸಂಬಳವಾಗದ ಸಮಸ್ಯೆ ಗಮನದಲ್ಲಿದೆ. ಸಕಾಲಕ್ಕೆ ವೇತನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದಿದ್ದಾರೆ.