ಬೇಸಿಗೆ ರಜೆ ವಿಸ್ತರಣೆ ಆಗುತ್ತದೆ ಎಂಬ ಗೊಂದಲಕ್ಕೆ ಶಿಕ್ಷಣ ಇಲಾಖೆ ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದೆ. ನಿಗದಿಯಂತೆ ಮೇ 16ರಂದು ಶಾಲೆಗಳು ಆರಂಭವಾಗಲಿದೆ ಎಂದು ತಿಳಿಸಿದೆ.
ಹೌದು, ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ನಿಗದಿತ ದಿನಾಂಕದಂದೇ ಶಾಲೆ ಆರಂಭವಾಗಲಿದ್ದು, ಕಳೆದ ಎರಡು ವರ್ಷಗಳಿಂದ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ 15 ದಿನ ಮೊದಲೇ ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬಿಸಿಲ ತಾಪಮಾನ ಹೆಚ್ಚಾಗಿರುವುದರಿಂದ ಜೂನ್ 15ರವರೆಗೆ ರಜೆ ವಿಸ್ತರಿಸಬೇಕು ಎಂದು ಕೆಲವು ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದರು. ಇದಕ್ಕೆ ಶಾಲಾ ಸಿಬ್ಬಂದಿ ಮತ್ತು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದರು. ಈಗ ಶಿಕ್ಷಣ ಸಚಿವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.