ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗು ಎಡಿಜಿಪಿ ಅಮ್ರಿತ್ ಪೌಲ್ ಸೇರಿ ಒಟ್ಟು 42 ಮಂದಿಯನ್ನ ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಕರಣ ಸಂಬಂದ ಈಗಾಗಲೇ ರಾಜಕೀಯ ತಿರುವು ಪಡೆದುಕೊಂಡಿದ್ದು ಆಡಳಿತ ಪಕ್ಷದ ಸಚಿವರು ಹಾಗು ಮಾಜಿ ಮುಖ್ಯಮಂತ್ರಿಗಳ ಮಗನ ವಿರುದ್ದ ಆರೋಪ ಕೇಳಿ ಬಂದಿದೆ. ಈ ನಡುವೆ ಕಲಬುರಗಿಯಲ್ಲಿ ಬೆರಳಚ್ಚು ಅಧಿಕಾರಿ ಆನಂದ್ ಮೇತ್ರಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ನಡುವೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನಾಥ್ ಹಿರೇಮಠನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇತ್ತೀಚಿಗೆ ಬೇರೊಂದು ಇಲಾಖೆಗೆ ಎತ್ತಂಗಡಿಯಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್ ವಿರುದ್ದ ದೂರು ಕೇಳಿ ಬಂದಿದ್ದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗುವ ಆಸೆಗೆ ಬಿದ್ದು ಆಡಳಿತ ಪಕ್ಷದ ಸಚಿವರುಗಳು ಮಾತನ್ನು ಕೇಳಿ ಈಗೆಲ್ಲ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ನಡುವೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಿಎಸ್ಐ ಅಭ್ಯರ್ಥಿ ರಾಘವೇಂದ್ರನನ್ನು ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.